ಬೆಳಗಾವಿ,ನವೆಂಬರ್,3,2025 (www.justkannada.in): ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ. ಚರ್ಚೆ ವೇಳೆ ನೋಡೋಣ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಸದ್ಯ ನಾನು ದೆಹಲಿಗೆ ಹೋಗುವುದಿಲ್ಲ, ಇಲ್ಲೇ ಇರುತ್ತೇನೆ. ಅವಶ್ಯಕತೆ ಬಂದಾಗ ದೆಹಲಿಗೆ ಹೋಗುತ್ತೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಆಗಿಲ್ಲ. ಚರ್ಚೆ ವೇಳೆ ನೋಡೋಣ. ಡಿಕೆ ಶಿವಕುಮಾರ್- ಮಲ್ಲಿಕಾರ್ಜುನ ಖರ್ಗೆ ಭೇಟಿ ಬಗ್ಗೆ ಗೊತ್ತಿಲ್ಲ. ಹೋದಾಗ ನೋಡೋಣ ಎಂದರು.
ಸಂಫುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿ ಇಲ್ಲ. ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಬಿಹಾರ ಕಾಂಗ್ರೆಸ್ ಮುಖಂಡ ಹೇಳಿಕೆ ವಿಚಾರ, ಅವರವರ ಅಭಿಮಾನಿಗಳು ಹೇಳಿತ್ತಾರೆ. ಹಾಗೆ ಹೇಳಿರಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
Key words: no discussion, KPCC president, post, Minister, Sathish Jarkiholi







