ಕಬ್ಬಿನ ದರ ನಿಗದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸೂಕ್ತ ನಿರ್ಧಾರ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ನವೆಂಬರ್,6,2025 (www.justkannada.in): ಕಬ್ಬಿನ ದರ ನಿಗದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಸರ್ಕಾರದ ಪರ ಹೆಚ್.ಕೆ ಪಾಟೀಲ್ ರೈತರಿಂದ ಅಹವಾಲು ಸ್ವೀಕರಿಸಿದ್ದಾರೆ. ಕಬ್ಬಿಗೆ ದರ ನಿಗದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಆಗುತ್ತೆ.  ಸಿಎಂ ಸಿದ್ದರಾಮಯ್ಯ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

ಸಕ್ಕರೆ ಕಾರ್ಖಾನೆಗಳು ಒಂದೇ ಬೆಲೆ ಕೊಡಲು ಆಗಲ್ಲ. ಆದರೆ ಕಬ್ಬಿಗೆ ಒಂದು ಬೆಲೆ ನಿಗದಿಯಾಗಲಿದೆ. ಮಹಾರಾಷ್ಟ್ರದಲ್ಲಿ ರಿಕವರಿ ಹೆಚ್ಚಿದೆ ಪ್ರತಿ ವರ್ಷ ಹೆಚ್ಚು ದರ ಕೊಡುತ್ತಾರೆ. ಒಂದು ರಿಕವರಿಗೆ 300 ರೂ ವ್ಯತ್ಯಾಸವಿದೆ  ನಾವು ಮಹಾರಾಷ್ಟ್ರ ಮಾದರಿಯಲ್ಲಿ ದರ ನೀಡಲು ಆಗಲ್ಲ.  ಕಬ್ಬಿಗೆ ದರ ನಿಗದಿ ಮಾಡೋದು ಕೇಂದ್ರ ಸರ್ಕಾರ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

Key words: CM Siddaramaiah, sugarcane price, fixing, Minister, Sathish Jarkiholi