ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಎಲ್ಲೂ ಚರ್ಚೆ ಆಗಿಲ್ಲ-ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಡಿಸೆಂಬರ್,5,2025 (www.justkannada.in):  ಅಧಿಕಾರ ಹಂಚಿಕೆ,  ನಾಯಕತ್ವ ಬದಲಾವಣೆ ಚರ್ಚೆಗೆ ಸ್ವಲ್ಪ ದಿನಗಳ ಕಾಲ ಬ್ರೇಕ್ ಬಿದ್ದು ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಅಗ್ಗಾಗ್ಗೆ ಚರ್ಚೆ ಮುನ್ನೆಲೆಗೆ ಬರುತ್ತಲೇ ಇದೆ. ಇದೀಗ ಈ ಕುರಿತು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಎಲ್ಲೂ ಚರ್ಚೆಯಾಗಿಲ್ಲ ಎಂದಿದ್ದಾರೆ. ಪ್ರತ್ಯೇಕವಾಗಿ ಜಾಸ್ತಿನೇ ಮಾತನಾಡಿರಬಹುದು.  ಆದರೆ  ಪಕ್ಷದಲ್ಲಿ ಅಂತಿಮ ತೀರ್ಮಾನವಾಗುತ್ತೆ. ಡಿಕೆ ಶಿವಕುಮಾರ್  ಬೆಂಬಲ ಕೇಳುವ ಪ್ರಶ್ನೆಯೇ ಇಲ್ಲ ಎಂದರು.

ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಮದುವೆಗೆ ಬಂದಿದ್ದವು. ಈ ವೇಳೆ ನಾನು  ಡಿಕೆ ಶಿವಕುಮಾರ್ ಭೇಟಿ ಮಾಡಿದ್ದವು ಎಂದರು.

Key words: no discussion, post, KPCC president, Minister, Sathish Jarkiholi