ಬೆಂಗಳೂರು,ಜನವರಿ,2,2026 (www.justkannada.in): ಮಾರ್ಚ್ ನಲ್ಲಿ ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಫೆಬ್ರವರಿ ತಿಂಗಳಿನಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ನಂತರ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆಯಾಗಲಿದೆ ಎಂದು ತಿಳಿಸಿದರು.
ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆಯಾಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆಯಾಗಿ ಫೈರಿಂಗ್ ನಡೆದಿದೆ. ಘಟನೆಯ ಬಗ್ಗೆ ತನಿಖೆ ನಡೆಸಿದರೆ ಸತ್ಯಾಂಶ ಹೊರಬರಲಿದೆ ಯಾರು..? ಏಕೆ ಗಲಾಟೆ ಮಾಡಿದರು ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕು ಎಂದರು.
Key words: state Budget, March, Minister, Sathish Jarkiholi







