MLC ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಏನು..?

ಬೆಳಗಾವಿ,ಅಕ್ಟೋಬರ್,23,2025 (www.justkannada.in): ನಾನು ಸಿಎಂ ಸಿದ್ದರಾಮಯ್ಯನವರ ಉತ್ತರಾಧಿಕಾರಿ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಯತೀಂದ್ರ ಸಿದ್ದರಾಮಯ್ಯ ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾನು ಸಿದ್ದರಾಮಯ್ಯನವರ ಉತ್ತರಾಧಿಕಾರಿ ಅಂತಾ ಹೇಳಿಲ್ಲ . ಅದನ್ನು ಜನರು ಪಕ್ಷ ಹೇಳಬೇಕು. ಕಾಂಗ್ರೆಸ್ ನಲ್ಲಿ ಅರಸು,  ನಂತರ ಬಂಗಾರಪ್ಪ ಬಳಿಕ ಸಿದ್ದರಾಮಯ್ಯ ಎಂದು ತಿಳಿಸಿದರು.

ನಿನ್ನೆ  ಮಾತನಾಡಿದ್ದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ನಮ್ಮ ತಂದೆ ರಾಜಕೀಯದ ಕೊನೆಗಾಲದಲ್ಲಿದ್ದಾರೆ.  ಅವರ ವೈಚಾರಿಕತ್ವ, ಪ್ರಗತಿಪರ ಚಿಂತನೆಗಳು ಹಾಗೂ ಎಲ್ಲರನ್ನೂ ಸಮಾನಾಗಿ ತೆಗೆದುಕೊಂಡು ಹೋಗುವ ನಾಯಕತ್ವದ ಗುಣ ಸಚಿವರಾದ ಸತೀಶ್‌ ಜಾರಕಿಹೊಳಿ ಅವರಲ್ಲಿದೆ ಅವರು ನಾಯಕತ್ವವನ್ನು ನಿಭಾಯಿಸುತ್ತಾರೆ ಎಂದಿದ್ದರು. ಈ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

Key words:  Minister, Sathish Jarkiholi, MLC, Yathindra Siddaramaiah, statement