Monday, October 5, 2026

BDA Apartments

ನಾಡು ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ ಎಸ್.ಎಂ ಕೃಷ್ಣ: ಅವರ ಆಡಳಿತ ವೈಖರಿ ರ...
Home Front Page ಆದಷ್ಟು ಬೇಗ ಗೊಂದಲ ಬಗೆಹರಿಸಲು ಹೈಕಮಾಂಡ್ ಗೆ ಹೇಳಿದ್ದೇವೆ- ಸಚಿವ ಸತೀಶ್ ಜಾರಕಿಹೊಳಿ

ಆದಷ್ಟು ಬೇಗ ಗೊಂದಲ ಬಗೆಹರಿಸಲು ಹೈಕಮಾಂಡ್ ಗೆ ಹೇಳಿದ್ದೇವೆ- ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ,ಫೆಬ್ರವರಿ,20,2026 (www.justkannada.in):  ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲವನ್ನು ಆದಷ್ಟು ಬೇಗ ಬಗೆಹರಿಸುವಂತೆ ಹೈಕಮಾಂಡ್ ಗೆ ಹೇಳಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ ಅವರು, ಡಿಕೆ ಶಿವಕುಮಾರ್  ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಸಾಮಾನ್ಯ.  ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅದಷ್ಟು ಬೇಗ ಗೊಂದಲ ಬಗೆಹರಿಸುವಂತೆ ಹೈಕಮಾಂಡ್ ಗೆ ಹೇಳಿದ್ದೇವೆ. ಅವಕಾಶ ಸಿಕ್ಕರೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೇವೆ ಎಂದರು.

ಕೆಲ ಶಾಸಕರು ಮುಖಂಡರ ಜೊತೆ ಸಚಿವ ಸತೀಶ್ ಜಾರಕಿಹೊಳಿ ದೆಹಲಿಗೆ ತೆರಳಿದ್ದಾರೆ.

Key words: high command, resolve, confusion, Minister, Satish Jarkiholi