Thursday, August 6, 2026

BDA Apartments

Home Front Page ಡಿಸಿಎಂ ಡಿಕೆಶಿ ಭೇಟಿ, ಚರ್ಚಿಸಿದ ವಿಷಯಗಳ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ

ಡಿಸಿಎಂ ಡಿಕೆಶಿ ಭೇಟಿ, ಚರ್ಚಿಸಿದ ವಿಷಯಗಳ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಏಪ್ರಿಲ್,20,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಅವರ ಭೇಟಿಯ ಹಿಂದೆ ಯಾವುದೇ ರಾಜಕೀಯ ವಿಶೇಷತೆ ಇಲ್ಲ. ಪಕ್ಷದ ಸಂಘಟನೆ ಮತ್ತು ಸರ್ಕಾರದ ಕೆಲಸಗಳ ಬಗ್ಗೆ ಚರ್ಚಿಸಲು ಭೇಟಿ ಮಾಡಲಾಗಿತ್ತು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಉಪ ಚುನಾವಣೆ ವೇಳೆ, ಪಕ್ಷದ ಸಂಘಟನೆ ದೃಷ್ಟಿಯಿಂದ ಅಲ್ಪಸಂಖ್ಯಾತ ಮುಖಂಡರನ್ನು ಪಕ್ಷದಿಂದ ದೂರವಿಟ್ಟಿದ್ದು ಸರಿಯಲ್ಲ ಎಂದು ತಿಳಿಸಿದ್ದೇನೆ. ಈ ವಿಷಯದ ಕುರಿತು ಸುದೀರ್ಘವಾಗಿ ಚರ್ಚಿಸಿದ್ದೇನೆ. ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ ಎಂದರು.

ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಭದ್ರ ಬುನಾದಿಯಾಗಿದ್ದು, ಅವರಿಗೆ ಸೂಕ್ತ ಪ್ರಾತಿನಿಧ್ಯ ಮತ್ತು ನ್ಯಾಯ ಸಿಗಬೇಕು ಎಂಬುದು ನಮ್ಮ ನಿಲುವು. ‘ಪಕ್ಷವು ಎಲ್ಲ ಸಮುದಾಯಗಳನ್ನು ಒಳಗೊಂಡು ಹೋಗಬೇಕಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು

‘ಶಾಸಕ ಎನ್.ಎ. ಹ್ಯಾರಿಸ್,  ಪುತ್ರ ನಲಪಾಡ್ ಮನೆ ಮೇಲೆ ಇಡಿ ದಾಳಿ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ದಾಳಿ ಬಗ್ಗೆ ನನಗೆ ಮಾಹಿತಿ ಇಲ್ಲ. ದಾಳಿ ನಡೆದರೆ ಕಾನೂನು ಹೋರಾಟ ಮಾಡಬೇಕು ಅಷ್ಟೆ ಎಂದರು.

Key words: Minister, Satish Jarkiholi, DCM, DK Shivakumar