ಬೆಂಗಳೂರು,ಸೆಪ್ಟಂಬರ್,11,2026 (www.justkannada.in): ಕಳೆದ ಎರಡು ದಿನಗಳ ಹಿಂದೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿಯಾಗಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದು ಇಡಿ ದಾಳಿಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. 
ಈ ಬೆನ್ನಲ್ಲೆ ಸಿಎಂ ಡಿಕೆ ಶಿವಕುಮಾರ್ ಅವರು ನಿನ್ನೆ ರಾತ್ರಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ನಿನ್ನೆ ರಾತ್ರಿ 1 ಗಂಟೆ ವೇಳೆಗೆ ಸರ್ಕಾರಿ ನಿವಾಸದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್ ಇಡಿ ದಾಳಿ ವಿಚಾರವಾಗಿ ಚರ್ಚಿಸಿ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. 
Key words: ED, Raid, Minister, Satish Jarkiholi, CM, DK Shivakumar, Meet







