Friday, September 18, 2026

BDA Apartments

ಬೆಂಗಳೂರಿನ ಎಲ್ಲಾ ಆಸ್ಪತ್ರೆಗಳ ಪರಿಶೀಲನೆ, ವರದಿಗೆ ಸಚಿವ ಶರಣ ಪ್ರಕಾಶ್ ಪಾಟೀ...
Home Front Page ಬೆಂಗಳೂರಿನ ಎಲ್ಲಾ ಆಸ್ಪತ್ರೆಗಳ ಪರಿಶೀಲನೆ, ವರದಿಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ಆದೇಶ

ಬೆಂಗಳೂರಿನ ಎಲ್ಲಾ ಆಸ್ಪತ್ರೆಗಳ ಪರಿಶೀಲನೆ, ವರದಿಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ಆದೇಶ

ಬೆಂಗಳೂರು,ಏಪ್ರಿಲ್, 30,2026 (www.justkannada.in): ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಜನರು ಸಾವನ್ನಪ್ಪಿದ ಘಟನೆ ಬೆನ್ನಲ್ಲೆ ಇದೀಗ ಬೆಂಗಳೂರು ನಗರದ ಎಲ್ಲಾ ಆಸ್ಪತ್ರೆಗಳನ್ನು ಪರಿಶೀಲಿಸಿ ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶಿಸಿದ್ದಾರೆ.

ಬೌರಿಂಗ್ ಆಸ್ಪತ್ರೆ,  ವಿಕ್ಟೋರಿಯಾ,  ಕೆಸಿ ಜನರಲ್, ಸಿವಿ ರಾಮನಗರ ಆಸ್ಪತ್ರೆ ಸೇರಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಾಂಪೌಂಡ್ ಸೇರಿ ಕಟ್ಟಡಗಳ ಕ್ವಾಲಿಟಿ ಚೆಕ್ ನಡೆಸುವಂತೆ ಸಚಿವ ಶರಣ ಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಹಾಗೆಯೇ ಒಂದು ವಾರದೊಳಗೆ ಎಲ್ಲಾ ಆಸ್ಪತ್ರೆಗಳ ವರದಿ ನೀಡುವಂತೆ ಸಚಿವ ಶರಣ ಪ್ರಕಾಶ್ ಪಾಟೀಲ್ ಸೂಚಿಸಿದ್ದಾರೆ ಎನ್ನಲಾಗಿದೆ. ನಿನ್ನೆ ಬಿರುಗಾಳಿ ಸಹಿತ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ್ದರು.

Key words: Minister, Sharan Prakash Patil, orders, inspection, all hospitals, Bengaluru