Tuesday, August 11, 2026

BDA Apartments

Home Front Page ನನ್ನನ್ನ ಸಚಿವ ಸಂಪುಟದಿಂದ ಕೈಬಿಡುವ ಪ್ರಶ್ನೆಯೇ ಇಲ್ಲ-ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ…

ನನ್ನನ್ನ ಸಚಿವ ಸಂಪುಟದಿಂದ ಕೈಬಿಡುವ ಪ್ರಶ್ನೆಯೇ ಇಲ್ಲ-ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ…

ನವದೆಹಲಿ,ಜು,29,2020(www.justkannada.in):   ರಾಜ್ಯ ಸಚಿವ ಸಂಪುಟ ಪುನರಚನೆ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಸೇರಿ ಕೆಲ ಸಚಿವರನ್ನ ಕೈಬಿಡಲಿದ್ದಾರೆಂಬ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗಿತ್ತು. ಈ ಕುರಿತು ಸ್ವತಃ ಶಶಿಕಲಾ ಜೊಲ್ಲೆ ಅವರೇ ಸ್ಪಷ್ಟನೆ ನೀಡಿದ್ದಾರೆ.

ನನ್ನನ್ನ ಸಚಿವ ಸಂಪುಟದಿಂದ ಕೈಬಿಡಲ್ಲ. ಸಂಪುಟದಿಂದ ನನ್ನನ್ನ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.minister-shashikala-jolle-cabinet-restructure-leave

ಸಚಿವೆ ಶಶಿಕಲಾ ಜೊಲ್ಲೆ  ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದು, ಈ ಸಂಬಂಧ ಸಚಿವ ಸ್ಥಾನ ಉಳಿಸಿಕೊಳ್ಳಲು ದೆಹಲಿಗೆ ತೆರಳಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯದಲ್ಲಿ ಸಚಿವ ಸಂಪುಟ ಪುನರಚನೆ ಸಾಧ್ಯತೆ ಇದೆ. ಆದರೇ ನನ್ನನ್ನ ಸಂಪುಟದಿಂದ ಕೈಬಿಡಲ್ಲ. ಕಾಗೆ ಕೂರಲು ಕೊಂಬೆ ಮುರಿದಂತಾಗಿದೆ. ಅಭಿವೃದ್ಧಿ ವಿಚಾರವಾಗಿ ಚರ್ಚಿಸಲು ನಾನು ದೆಹಲಿಗೆ ಬಂದಿದ್ದೇನೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ ಎಂದು ತಿಳಿಸಿದರು.

Key words: minister- shashikala jolle-cabinet- restructure-leave