Tuesday, August 18, 2026

BDA Apartments

Home Front Page ಉಚ್ಚಗಣಿ ದೇವಾಲಯ ತೆರವು: ಅಧಿಕಾರಿಗಳು ಮಾಡಿದ್ದು ತಪ್ಪು ಎಂದ ಸಚಿವೆ ಶಶಿಕಲಾ ಜೊಲ್ಲೆ

ಉಚ್ಚಗಣಿ ದೇವಾಲಯ ತೆರವು: ಅಧಿಕಾರಿಗಳು ಮಾಡಿದ್ದು ತಪ್ಪು ಎಂದ ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು, ಸೆಪ್ಟೆಂಬರ್ 26, 2021 (www.justkannada.in): ಉಚ್ಚಗಣಿ ದೇವಾಲಯ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ ನೀಡಿದ್ದಾರೆ.

ಅಧಿಕಾರಿಗಳು ಮಾಡಿರೋದು ತಪ್ಪು. ಅಧಿಕಾರಿಗಳು ಸರ್ಕಾರದ ಗಮನಕ್ಕೆ ಬಾರದಂತೆ ಕೆಲಸ ಮಾಡಿದ್ದಾರೆ. ಅಧಿಕಾರಿಗಳ ತಲೆದಂಡದ ಬಗ್ಗೆ ಸಿಎಂ ಹಾಗೂ ಕಂದಾಯ ಸಚಿವರು ಯೋಚನೆ ಮಾಡ್ತಿದ್ದಾರೆ ಎಂದು ತಿಳಿಸಿದ್ದಾರೆ.

ಈ ವಿಚಾರದ ಬಗ್ಗೆ ಅಧಿವೇಶನದಲ್ಲಿಯೂ ಚರ್ಚೆ ಆಗಿದೆ. ಇದರ ಬಗ್ಗೆ ಸರ್ಕಾರವು ಮಸೂದೆಯನ್ನು ಜಾರಿಗೆ ತರುತ್ತಿದೆ. ಇದು ಜನರ ಭಾವನಾತ್ಮಕ ವಿಚಾರವಾಗಿದೆ. ಅವರ ಭಾವನೆಗಳಿಗೂ ಬೆಲೆ ಕೊಡಬೇಕಾಗಿದೆ ಎಂದು ತಿಳಿಸಿದ್ದಾರೆ.

ಉಚ್ಚ ನ್ಯಾಯಾಲಯ ಅದೇಶವನ್ನ ಪಾಲನೆ ಮಾಡಿಕೊಂಡು ಮಸೂದೆ ಜಾರಿಗೆ ತರಲಾಗುವುದು. ಈ ಮಸೂದೆಯಿಂದ ರಾಜ್ಯದ ಸಾವಿರಾರು ದೇವಾಲಯಗಳು ರಕ್ಷಣೆಯಾಗಲಿದೆ. ಎಲ್ಲಾ ಧರ್ಮದ ಚರ್ಚು ಮಸೀದಿ ದೇವಾಲಯಗಳು ರಕ್ಷಣೆಯಾಗಲಿವೆ ಎಂದು ಮೈಸೂರಿನಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.