ಮಾಜಿ ಶಾಸಕ ಸಿ.ಗುರುಸ್ವಾಮಿ ನಿಧನಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ

ಮೈಸೂರು, ಆಗಸ್ಟ್, 19, 2020(www.justkannada.in): ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಹಿರಿಯ ಮುಖಂಡ ಸಿ. ಗುರುಸ್ವಾಮಿ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ ಸೂಚಿಸಿದ್ದಾರೆ. jk-logo-justkannada-logo

ಸಿ.ಗುರುಸ್ವಾಮಿ ಅವರು ಅನುಭವಿ ಹಾಗೂ ಜನಾನುರಾಗಿ ರಾಜಕಾರಣಿಯಾಗಿದ್ದು, ಮೈಸೂರು ಹಾಗೂ ಚಾಮರಾಜನಗರ ಭಾಗದಲ್ಲಿ ಬಿಜೆಪಿ ಪಕ್ಷಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದಾರೆ. ಅವಿಭಜಿತ ಮೈಸೂರಿನಲ್ಲಿ ಜಿಲ್ಲಾ ಪರಿಷತ್ ಸದಸ್ಯರಾಗಿದ್ದರಲ್ಲದೆ, ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರಾಗಿ ಆಯ್ಕೆಯಾಗುವ ಮೂಲಕ ಬಿಜೆಪಿಯ ಪ್ರಥಮ ಶಾಸಕರು ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ. ಇವರು ಕೋವಿಡ್ ಸೋಂಕಿಗೆ ಒಳಗಾಗಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಸಂತಾಪ ಸೂಚಿಸಿದ್ದಾರೆ.

key words: Minister – Somashekhar- condoles – death -former MLA- C Guruswamy