ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಸಚಿವ ಶ್ರೀರಾಮುಲು ನಿರ್ಧಾರ.

ಬಳ್ಳಾರಿ,ಮಾರ್ಚ್,15,2023(www.justkannada.in): ರಾಜ್ಯ  ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ಚಟುವಟಿಕೆ ಬಿರುಸುಗೊಂಡಿದ್ದು, ಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ. ಈ ಮಧ್ಯೆ ಬಳ್ಳಾರಿಯ ಕ್ಷೇತ್ರ  ಬಾರಿ ಕುತೂಹಲಕ್ಕೆ ಕಾರಣವಾಗಿದ್ದು, ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಸಾರಿಗೆ ಸಚಿವ ಶ್ರೀರಾಮುಲು ನಿರ್ಧಾರ ಮಾಡಿದ್ದಾರೆ.

ಬಳ್ಳಾರಿ ನಗರದಿಂದ ಕೆ ಆರ್ ಪಿ ಪಿ ಯಿಂದ ಮಾಜಿ ಸಚಿವ ಜನಾರ್ಧನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ಕಣಕ್ಕಿಳಿದಿದ್ದಾರೆ.    ಇದೀಗ ಸಚಿವ ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.

ಮೊಳಕಾಲ್ಮೂರು ಕ್ಷೇತ್ರದ ಶಾಸಕರಾಗಿರುವ ಶ್ರೀರಾಮುಲು  ಈ ಬಾರಿ ಸಂಡೂರಿನಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದರು. ಈಗ ಬಳ್ಳಾರಿ ಗ್ರಾಮಿಣ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.

Key words: Minister- Sriramulu-decision – contest – Bellary –Rural- Constituency.