ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಿಸಿದ ಸಚಿವ ಎಸ್.ಟಿ ಸೋಮಶೇಖರ್….

ಮೈಸೂರು,ಆ,14,2020(www.justkannada.in):  ಎಚ್.ಡಿ.ಕೋಟೆ, ತಾಲ್ಲೂಕಿನ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆ ಹಾಗೂ ಹೊಸ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲ ವಿತರಣಾ ಸಮಾರಂಭವನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಉದ್ಘಾಟಿಸಿದರು.jk-logo-justkannada-logo

ಶಾಸಕರಾದ ಅನಿಲ್ ಚಿಕ್ಕಮಾದು ಮಾತನಾಡಿ, ಸಹಕಾರ ಸಚಿವರಾದ ಸೋಮಶೇಖರ್ ಅವರು ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮನೋಭಾವ ಹೊಂದಿರುವುದಲ್ಲದೆ, ಅಭಿವೃದ್ಧಿ ಕೆಲಸಗಳಿಗೆ ಪ್ರೋತ್ಸಾಹ ನೀಡುತ್ತಾರೆ. ರೈತರು ಕೇಳಿದ ಸಾಲವನ್ನು  ಕೊಡುವ ವ್ಯವಸ್ಥೆಯಾಗಬೇಕಿದೆ. ಅವರು ಕೇಳಿದ ಸಾಲಕ್ಕಿಂತ ಕಡಿಮೆ ಸಾಲ ಕೊಡಲಾಗುತ್ತಿದೆ. ಇದರಿಂದ ಯಾವುದೇ ಪ್ರಯೋಜನವಾಗದು. ಈ ನಿಟ್ಟಿನಲ್ಲಿ ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಹರೀಶ್ ಗೌಡ ಮಾತನಾಡಿ, ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ನಂಬರ್ 1 ಸಚಿವರಾಗಿದ್ದು, ಅನೇಕ ಜನಪರ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ. ಆಶಾ ಕಾರ್ತಕರ್ತೆಯರಿಗೆ ತಲಾ 3 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡುವ ಯೋಜನೆಯಲ್ಲಿ ಸಹಕಾರ ಇಲಾಖೆಯ ಹಾಗೂ ಸಚಿವರ ಪಾತ್ರ ಬಹುದೊಡ್ಡದಿದೆ. ಇನ್ನು ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ಬರೋಬ್ಬರಿ 53 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿ ನೀಡಿದ್ದಾರೆ ಎಂದು ತಿಳಿಸಿದರು.minister-st-somashekhar-distributed-incentives-asha-worker

ರೈತರ ಸಮಸ್ಯೆಗೆ ಸ್ಪಂದಿಸುತ್ತಿರುವ ಸಚಿವರು, ಹೊಸ ರೈತರಿಗೆ ಸಾಲ ಕೊಡಿಸಬೇಕು ಎಂಬ ದೃಷ್ಟಿಯಿಂದ ಡಿಸಿಸಿ ಬ್ಯಾಂಕ್ ಗೆ ಹೆಚ್ಚುವರಿಯಾಗಿ 75 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ. ಇದರ ಮೂಲಕ ಹೊಸ ರೈತರಿಗೆ ಸಾಲ ಕೊಡುವ ಕಾರ್ಯವನ್ನು ಮಾಡಲಾಗುತ್ತದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ಉಪ ವಿಭಾಗಾಧಿಕಾರಿ ವೀಣಾ ಇತರರು ಇದ್ದರು.

Key words: Minister- ST Somashekhar- distributed- Incentives- Asha  worker