ಆರ್ ಎಸ್ ಎಸ್ ಅನ್ನು ತಾಲಿಬಾನ್ ಗೆ ಹೋಲಿಸಿದ ಸಿದ್ಧರಾಮಯ್ಯಗೆ ಸಚಿವ ಎಸ್.ಟಿ ಸೋಮಶೇಖರ್ ತಿರುಗೇಟು ನೀಡಿದ್ದು ಹೀಗೆ.

ಮೈಸೂರು,ಅಕ್ಟೋಬರ್,1,2021(www.justkannada.in): ಆರ್ ಎಸ್ ಎಸ್ ಅನ್ನ ತಾಲಿಬಾನ್ ಗೆ ಹೋಲಿಸಿದ ಮಾಜಿ ಸಿಎಂ ಸಿದ್ಧರಾಮಯ್ಯಗೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಸಿದ್ದರಾಮಯ್ಯರಿಗೆ ಕೋವಿಡ್ ಬಂದ ಮೇಲೆ ತಾವು ಏನು ಮಾತನಾಡುತ್ತಿದ್ದೇನೆ ಎಂಬುದೆ ಅವರಿಗೆ ಗೊತ್ತಾಗುತ್ತಿಲ್ಲ. ಅವರಿಗೆ ತಾಲಿಬಾನ್ ಗೊತ್ತಿಲ್ಲ, ಬಿಜೆಪಿ ಗೊತ್ತಿಲ್ಲ. ಯಾವುದಕ್ಕೂ ಯಾವ ಸಂಬಂಧವು ಇಲ್ಲದೆ ಏನೇನೋ ಮಾತನಾಡುತ್ತಿದ್ದಾರೆ. ಆರ್.ಎಸ್.ಎಸ್ ಬಗ್ಗೆ ತಿಳಿಯಬೇಕಾದರೆ ಯಾವುದಾದರು ಆರ್.ಎಸ್.ಎಸ್ ಶಾಖೆಗೆ ಬರಲಿ. ಅವರು ಶಾಖೆಗೆ ಬರುವುದಾದರೆ ನಾನೆ ಅವರನ್ನು ಖುದ್ದಾಗಿ ಒಂದು ಶಾಖೆಗೆ ಕರೆದುಕೊಂಡು ಹೋಗುತ್ತೇವೆ. ಅವರಿಗೆ ಮಾನಸಿಕವಾಗಿ ಏನಾಗಿದೆ ಎಂಬುದು ನನಗೆ ಗೊತ್ತಿಲ್ಲ. ಬೇಕಾದರೆ ತಿಳಿದುಕೊಂಡು ಹೇಳುತ್ತೇನೆ ಎಂದು ಟಾಂಗ್ ನೀಡಿದರು.

ದಸರಾ ಉದ್ಘಾಟನೆಗೆ 500 ಹಾಗೂ ಜಂಬೂ ಸವಾರಿಗೆ 1000 ಜನ ಎಂದು ತಜ್ಞರ ಸಮಿತಿ ಹೇಳಿದೆ.

ಮೈಸೂರು ದಸರಾಗೆ ಎಲ್ಲಾ ತಯಾರಿ ನಡೆದಿದೆ. ಸಂಜೆ ಒಳಗಡೆ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿ ಅಂತಿಮವಾಗಲಿದೆ. ಹಂಸಲೇಖ ಸೇರಿದಂತೆ ನಾಡಿನ ಹಲವು ಕಲಾವಿದರಿಗೆ ಕಾರ್ಯಕ್ರಮ ನೀಡಲಾಗುತ್ತೆ. ಉದ್ಘಾಟನೆಗೆ 500 ಹಾಗೂ ಜಂಬೂ ಸವಾರಿಗೆ 1000 ಜನ ಎಂದು ತಜ್ಞರ ಸಮಿತಿ ಹೇಳಿದೆ. ಇದನ್ನು ಹೆಚ್ಚು ಮಾಡಲು ಕೇಳಿದ್ದೇನೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಚಾಮರಾಜನಗರಕ್ಕೆ ಸಿಎಂ ಬಂದೆ ಬರುತ್ತಾರೆ.

ಸಿಎಂ ಬಸವರಾಜ ಬೊಮ್ಮಾಯಿ ಚಾಮರಾಜನಗರಕ್ಕೆ ಬಂದೆ ಬರ್ತಾರೆ. ಅಕ್ಟೋಬರ್ 6 ರಂದೆ ಸಿಎಂ ಮೈಸೂರಿಗೆ ಬರ್ತಾರೆ. ಬಳಿಕ ದಸರಾ ಉದ್ಘಾಟನೆಯಲ್ಲಿ ಪಾಲ್ಗೊಳ್ಳುತ್ತಾರೆ. ಆ ಬಳಿಕ ಏರ್‌ಪೋರ್ಟ್‌ನಲ್ಲಿ ರಾಷ್ಟ್ರಪತಿಗಳನ್ನ ಸ್ವಾಗತಿಸಿ ಚಾಮರಾಜನಗರ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

Key words: Minister- ST Somashekhar –Tong-formerCM- Siddaramaiah