Sunday, October 18, 2026

Dasara Wishes

Happy Dasara
Home Front Page ಬುಡಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರ ಕಿಟ್ ವಿತರಣೆ- ಸಚಿವ ಟಿ. ರಘುಮೂರ್ತಿ

ಬುಡಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರ ಕಿಟ್ ವಿತರಣೆ- ಸಚಿವ ಟಿ. ರಘುಮೂರ್ತಿ

ಮೈಸೂರು, ಸೆಪ್ಟಂಬರ್,.2,2026 (www.justkannada.in): ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿರುವ ಬುಡಕಟ್ಟು ಕುಟುಂಬಗಳ ಪೌಷ್ಟಿಕ ಆಹಾರ ಕಿಟ್ ವಿತರಣೆಯನ್ನು ಶೀಘ್ರದಲ್ಲೇ ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಟಿ. ರಘುಮೂರ್ತಿ ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್ ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವರನ್ನು ಭೇಟಿ ಮಾಡಿ, ಬುಡಕಟ್ಟು ಕುಟುಂಬಗಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ ಸ್ಥಗಿತಗೊಂಡಿರುವುದರಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಗಮನ ಸೆಳೆದರು. ಕಳೆದ ಆರು ತಿಂಗಳಿಂದ ಕಿಟ್ ವಿತರಣೆ ನಡೆಯದ ಕಾರಣ ಸಾವಿರಾರು ಆದಿವಾಸಿ ಕುಟುಂಬಗಳು ಪೌಷ್ಟಿಕ ಆಹಾರದ ಕೊರತೆ ಎದುರಿಸುತ್ತಿವೆ ಎಂದು ಸಚಿವರಿಗೆ ಮನವಿ ಸಲ್ಲಿಸಿದರು.

ಮನವಿಗೆ ಸ್ಪಂದಿಸಿದ ಸಚಿವ ಟಿ. ರಘುಮೂರ್ತಿ, ಪೌಷ್ಟಿಕ ಆಹಾರ ಕಿಟ್ ಪೂರೈಕೆಯ ಒಪ್ಪಂದ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಶೀಘ್ರದಲ್ಲೇ ಕಿಟ್ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಅಲ್ಲದೆ, ಮುಂದಿನ ದಿನಗಳಲ್ಲಿ ಬುಡಕಟ್ಟು ಜನರು ವಾಸಿಸುವ ಹಾಡಿಗಳಿಗೆ ಭೇಟಿ ನೀಡಿ, ಅವರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಪರಿಹರಿಸುವುದಾಗಿ ಭರವಸೆ ನೀಡಿದರು.

ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕಾಡು ಮತ್ತು ಕಾಡಂಚಿನ ಪ್ರದೇಶಗಳಲ್ಲಿ ಸುಮಾರು 48 ಸಾವಿರ ಬುಡಕಟ್ಟು ಕುಟುಂಬಗಳು ವಾಸಿಸುತ್ತಿವೆ. ಅರಣ್ಯ ಉತ್ಪನ್ನಗಳನ್ನು ಅವಲಂಬಿಸಿ ಜೀವನ ಸಾಗಿಸುವ ಈ ಕುಟುಂಬಗಳಲ್ಲಿನ ಅಪೌಷ್ಟಿಕತೆ ನಿವಾರಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು 2008ರಿಂದ ಉಚಿತ ಪೌಷ್ಟಿಕ ಆಹಾರ ಕಿಟ್ ವಿತರಿಸುವ ಯೋಜನೆಯನ್ನು ಜಾರಿಗೊಳಿಸಿದೆ.

ಕಿಟ್‌ ನಲ್ಲಿ ರಾಗಿ, ಮೊಟ್ಟೆ, ತುಪ್ಪ, ಅಡುಗೆ ಎಣ್ಣೆ, ಬೇಳೆಕಾಳು ಸೇರಿದಂತೆ ವಿವಿಧ ಪೌಷ್ಟಿಕಾಂಶಯುಕ್ತ ಆಹಾರ ಸಾಮಗ್ರಿಗಳನ್ನು ನೀಡಲಾಗುತ್ತಿತ್ತು. ಈ ಆಹಾರ ಸಾಮಗ್ರಿಗಳು ಬುಡಕಟ್ಟು ಕುಟುಂಬಗಳ ದೈನಂದಿನ ಪೌಷ್ಟಿಕ ಅಗತ್ಯಗಳನ್ನು ಪೂರೈಸುವಲ್ಲಿ ಪ್ರಮುಖ ಸಹಕಾರ ನೀಡುತ್ತಿದ್ದವು.ಬುಡಕಟ್ಟು ಕುಟುಂಬಗಳಿಗೆ raghumurthi

ಆದರೆ, ಕಳೆದ ಆರು ತಿಂಗಳಿಂದ ಕಿಟ್ ವಿತರಣೆ ಸ್ಥಗಿತಗೊಂಡಿರುವುದು ಆದಿವಾಸಿ ಕುಟುಂಬಗಳ ಬದುಕಿನ ಮೇಲೆ ಪರಿಣಾಮ ಬೀರಿದೆ. ದಿನನಿತ್ಯದ ಆಹಾರದ ಅಗತ್ಯತೆಗಳನ್ನು ಪೂರೈಸಲು ಕುಟುಂಬಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೆಲವರು ಜೀವನೋಪಾಯಕ್ಕಾಗಿ ವಲಸೆ ಹೋಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೆ. ಶಿವಕುಮಾರ್ ಸಚಿವರ ಗಮನಕ್ಕೆ ತಂದರು.ಬುಡಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರ ಕಿಟ್ ವಿತರಣೆ jk02_new jk02 new

ಈ ಹಿನ್ನೆಲೆಯಲ್ಲಿ ಪೌಷ್ಟಿಕ ಆಹಾರ ಕಿಟ್ ವಿತರಣೆಯನ್ನು ಯಾವುದೇ ವಿಳಂಬವಿಲ್ಲದೆ ಪುನರಾರಂಭಿಸಿ, ಬುಡಕಟ್ಟು ಕುಟುಂಬಗಳ ಆಹಾರ ಮತ್ತು ಪೌಷ್ಟಿಕ ಭದ್ರತೆಯನ್ನು ಖಾತರಿಪಡಿಸಬೇಕು ಎಂದು ಅವರು ಒತ್ತಾಯಿಸಿದರು. ಸಚಿವರ ಭರವಸೆಯಿಂದಾಗಿ ಕಿಟ್ ವಿತರಣೆ ಪುನರಾರಂಭವಾಗುವ ನಿರೀಕ್ಷೆ ಮೂಡಿದೆ.

Key words: food kits ,tribal families, Minister, T. Raghumurthy, MLC, K.Shivakumar