ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್ ಜೋಶಿ

ಬೆಂಗಳೂರು, ಮಾರ್ಚ್ 05, 2023 (www.justkannada.in) ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಅವರು ಬಿಜೆಪಿ ಪಕ್ಷದಲ್ಲೇ ಇರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸೋಮಣ್ಣ ಅವರು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸೋಮಣ್ಣ ಜೊತೆಗೆ ನಾನು ಮಾತನಾಡಿದ್ದೇನೆ. ಅವರು ನನ್ನ ಜೊತೆಗೆ ಸಂಪರ್ಕದಲ್ಲಿದ್ದಾರೆ. ಹೀಗಾಗಿ ಅವರು ಪಕ್ಷ ಬಿಡುವುದಿಲ್ಲ ಎಂದು ತಿಳಿಸಿದರು.

ಮಾರ್ಚ್ 12 ರಂದು ಬೆಂಗಳೂರು-ಮೈಸೂರು ಜನರ ಬಹು ನಿರೀಕ್ಷೆಯ ಬೆಂಗಳೂರು- ಮೈಸೂರು ದಶಪಥ ರಸ್ತೆ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಮಾಡಲಿದ್ದಾರೆ. ಮಂಡ್ಯ ಕಾರ್ಯಕ್ರಮದ ಬಳಿಕ ಪ್ರಧಾನಿ ಮೋದಿ ಧಾರವಾಡಕ್ಕೆ ಬರಲಿದ್ದಾರೆ ಎಂದು ಮಾಹಿತಿ ನೀಡಿದರು.