Thursday, August 6, 2026

BDA Apartments

Home Front Page ನಿರೀಕ್ಷಣಾ ಜಾಮೀನು ಕೋರಿ ಸಚಿವ ವಿ.ಸೋಮಣ್ಣ ಸಲ್ಲಿಸಿದ್ಧ ಅರ್ಜಿ ವಜಾ..

ನಿರೀಕ್ಷಣಾ ಜಾಮೀನು ಕೋರಿ ಸಚಿವ ವಿ.ಸೋಮಣ್ಣ ಸಲ್ಲಿಸಿದ್ಧ ಅರ್ಜಿ ವಜಾ..

ಬೆಂಗಳೂರು,ಏಪ್ರಿಲ್,1,2022(www.justkannada.in): ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿ.ಸೋಮಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ಧ ಅರ್ಜಿಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿ.ಸೋಮಣ್ಣಗೆ  ಏಪ್ರಿಲ್ 16 ರಂದು ಖುದ್ಧು ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಈ  ಹಿನ್ನೆಲೆಯಲ್ಲಿ ಬಂಧನ ಭೀತಿಯಲ್ಲಿದ್ಧ ಸಚಿವ ವಿ.ಸೋಮಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಬಂಧನ ಭೀತಿಗೆ ಸಕಾರಣಗಳು ಇಲ್ಲವೆಂದು ಕೋರ್ಟ್ ಅರ್ಜಿ ವಜಾಗೊಳಿಸಿದೆ.Congress- should not – accused-Minister -V. Somanna-mysore

ಸಚಿವ ಸೋಮಣ್ಣ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಆರೋಪದ ಮೇಲೆ 2013ರಲ್ಲಿ ರಾಮಕೃಷ್ಣ ಎಂಬುವವರು ದೂರು ನೀಡಿದ್ದರು. ಈ ಸಂಬಂಧ 2016ರಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿತ್ತು. ತನಿಖೆ ನಡೆಸಿದ ಪೊಲೀಸರು,  ಆದಾಯ ಮೀರಿ ಆಸ್ತಿ ಗಳಿಸಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಕೋರ್ಟ್ ಬಿ ರಿಪೋರ್ಟ್ ತಿರಸ್ಕರಿಸಿ ಸಮನ್ಸ್ ಜಾರಿ ಮಾಡಿತ್ತು.

Key words: Minister V. Somanna – anticipatory bail- petition -dismissed.