Thursday, August 6, 2026

BDA Apartments

Home Front Page ಬಿ.ಎಲ್ ಸಂತೋಷ್ ರನ್ನ ಭೇಟಿ ಮಾಡಿದ ಸಚಿವ ವಿ.ಸೋಮಣ್ಣ: ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಕುರಿತು...

ಬಿ.ಎಲ್ ಸಂತೋಷ್ ರನ್ನ ಭೇಟಿ ಮಾಡಿದ ಸಚಿವ ವಿ.ಸೋಮಣ್ಣ: ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ್ದು ಹೀಗೆ..

ಬೆಂಗಳೂರು,ಆ,22,2020(www.justkannada.in):  ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವೇ ಬಂದಿಲ್ಲ. ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೂಹ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.jk-logo-justkannada-logo

ಸಿಎಂ ಬಿಎಸ್ ಯಡಿಯೂರಪ್ಪರನ್ನ ಭೇಟಿ ಮಾಡಿ ಬಂದಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನ ಸಚಿವ ವಿ.ಸೋಮಣ್ಣ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.

ಬಳಿಕ ಮಾಧ್ಯಮದ ಜತೆ ಮಾತನಾಡಿದ ಸಚಿವ ವಿ.ಸೋಮಣ್ಣ, ಸಿಎಂ ಬಿಎಸ್ ಯಡಿಯೂರಪ್ಪರನ್ನ ಭೇಟಿಯಾಗಿ ಶುಭ ಕೋರಿದ್ದೆ. ಸಂತೋಷ್ ರನ್ನ ಭೇಟಿಯಾಗಿ ತುಂಬಾ ದಿನವಾಗಿತ್ತು. ಹೀಗಾಗಿ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದ್ದೇನೆ ಎಂದು ತಿಳಿಸಿದರು.minister-v-somanna-meet-bl-santosh

ಹಾಗೆಯೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಇಲ್ಲ. ಅದು ಕೇವಲ ಊಹಾಪೂಹ. ಇನ್ನು ಸಚಿವ ಸಂಪುಟ ವಿಸ್ತರಣೆ ವಿಚಾರ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಟ್ಟಿದ್ದು ಎಂದು ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದರು.

Key words: Minister -V. Somanna- meet- BL Santosh