ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ವಿ.ಸೋಮಣ್ಣ ನಾಮಪತ್ರ ಸಲ್ಲಿಕೆ: ಸಿಎಂ ಬೊಮ್ಮಾಯಿ ಸಾಥ್.

ಮೈಸೂರು,ಏಪ್ರಿಲ್,17,2023(www.justkannada.in):  ಭಾರಿ ಕುತೂಹಲ ಮೂಡಿಸಿರುವ ಮೈಸೂರು ಜಿಲ್ಲೆ ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಚಿವ ವಿ. ಸೋಮಣ್ಣ ಅವರು  ಇಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ  ಸಚಿವ ವಿ.ಸೋಮಣ್ಣ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ, ಗಣಪತಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ನಂತರ ನಂಜನಗೂಡು  ತಾ.ಪಂ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಸಚಿವ ವಿ.ಸೋಮಣ್ಣಗೆ ಸಿಎಂ ಬಸವರಾಜ ಬೊಮ್ಮಾಯಿ ಸಂಸದರಾದ ವಿ.ಶ್ರೀನಿವಾಸ್ ಪ್ರಸಾದ್, ಪ್ರತಾಪ್ ಸಿಂಹ ಸಾಥ್ ನೀಡಿದರು.

Key words: Minister -V. Somanna -nomination – BJP candidate -Varuna Constituency