ಕೊಡಗಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆ ಆಲಿಸಿದ ಸಚಿವ ವಿ.ಸೋಮಣ್ಣ…

ಕೊಡಗು,ಆ,8,2020(www.justkannada.in):  ಕಳೆದ ಮೂರ್ನಾಲ್ಕು ದಿನಗಳಿಂದ ಸುರಿದ ಮಹಾಮಳೆಗೆ ಕಾಫಿನಾಡು ಕೊಡಗಿನಲ್ಲಿ ಪ್ರವಾಹ ಸ್ಥಿತಿ ತಲೆದೂರಿದ್ದು ಈ ನಡುವೆ ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭೇಟಿ ನೀಡಿಪರಿಶೀಲನೆ ನಡೆಸಿದರು.jk-logo-justkannada-logo

ಕುಶಾಲನಗರದ ಕುವೆಂಪು ಮತ್ತು ಸಾಯಿ ಬಡಾವಣೆಗಳಿಗೆ ಸಚಿವ ವಿ.ಸೋಮಣ್ಣ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿದರು. ಸಚಿವ ಸೋಮಣ್ಣಗೆ ಶಾಸಕ ಅಪ್ಪಚ್ಚು ರಂಜನ್ ಮತ್ತು ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದರು. ಕೊಡಗಿನಲ್ಲಿ ಸುರಿಯುತ್ತಿದ್ದ ಭಾರಿ ಮಳೆ ಇದೀಗ ಕೊಂಚ ರಿಲೀಫ್ ನೀಡಿದೆ.

ಇನ್ನು ಜಿಲ್ಲೆಯಾದ್ಯಂತ ಮುಂಗಾರು ಮಳೆ  ಆರ್ಭಟಿಸುತ್ತಿದ್ದು ಗುಡ್ಡಗಳು ಕುಸಿಯುತ್ತಿವೆ. ಕಳೆದ ಎರಡು ದಿನಗಳ ಹಿಂದೆ ಬ್ರಹ್ಮಗಿರಿ ಬೆಟ್ಟ ಕುಸಿದು ತಲಕಾವೇರಿ ಅರ್ಚಕರ ಕುಟುಂಬ ನಾಪತ್ತೆಯಾಗಿದೆ.  ಇನ್ನು ಜಿಲ್ಲೆಯಲ್ಲಿ ರೆಡ್ ಆಲರ್ಟ್ ಘೋಷಣೆ ಮಾಡಿದ್ದು ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ.

Key words: Minister -V. Somanna – visit- flood- affected- area -kodagu