Thursday, September 17, 2026

BDA Apartments

Home Front Page ನಿಗದಿತ ಅವಧಿಯೊಳಗೆ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

ನಿಗದಿತ ಅವಧಿಯೊಳಗೆ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

ಬೆಂಗಳೂರು,ಜೂನ್,8,2026 (www.justkannada.in): ನಿಗದಿತ ಅವಧಿಯೊಳಗೆ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಿ. ಸಾರ್ವಜನಿಕರಿಗೆ ಶೀಘ್ರ ಮತ್ತು ಪರಿಣಾಮಕಾರಿ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ ನೀಡಿದರು.

ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಲಾಖೆಯ ವಿವಿಧ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದ ಪ್ರಗತಿ ಕುರಿತು ಸಮಗ್ರ ಪರಿಶೀಲನಾ ಸಭೆ ನಡೆಸಿದರು.ನಿಗದಿತ ಅವಧಿಯೊಳಗೆ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಿ BDA JK_Adv BDA Adv

ಸಭೆಯಲ್ಲಿ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ನಾಗರಿಕರಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಲಭ್ಯಗಳು, ಬಾಕಿ ಉಳಿದಿರುವ ಯೋಜನೆಗಳ ಸ್ಥಿತಿ ಹಾಗೂ ಭವಿಷ್ಯದ ಕಾರ್ಯಯೋಜನೆಗಳ ಕುರಿತು ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ yathindra

ಯೋಜನೆಗಳ ಅನುಷ್ಠಾನದಲ್ಲಿ ಗುಣಮಟ್ಟ ಮತ್ತು ಪಾರದರ್ಶಕತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಸಾರ್ವಜನಿಕರಿಗೆ ಶೀಘ್ರ ಮತ್ತು ಪರಿಣಾಮಕಾರಿ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಇಲಾಖೆಯ ಅಭಿವೃದ್ಧಿ ಕಾರ್ಯಗಳು ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳುವಂತೆ ಸಮನ್ವಯದಿಂದ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

Key words:  development works, Meeting, Minister, Yathindra Siddaramaiah