ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಸಚಿವ ಜಮೀರ್ ಅಹ್ಮದ್ ಖಾನ್ ಗೆ ಹಿನ್ನಡೆ.

ಬೆಂಗಳೂರು, ನವೆಂಬರ್ 20,2023(www.justkannada.in):  ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನ ರದ್ದು ಕೋರಿ  ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.

87.44 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಜಮೀರ್ ವಿರುದ್ಧ ದಾಖಲಿಸಿದ್ದ ಭ್ರಷ್ಟಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಸಚಿವ ಜಮೀರ್ ಅಹ್ಮದ್ ಖಾನ್ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, ಅರ್ಜಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಮಧ್ಯೆ, ಸುಪ್ರೀಂಕೋರ್ಟ್‌ನಲ್ಲಿ ಈಗಾಗಲೇ ಮೇಲ್ಮನವಿ ಬಾಕಿ ಹಿನ್ನೆಲೆ‌ಯಲ್ಲಿ, ಹೈಕೋರ್ಟ್ ಆದೇಶ ತಡೆಹಿಡಿಯುವಂತೆ ಜಮೀರ್ ಪರ ವಕೀಲರು ಮನವಿ ಮಾಡಿದ್ದು, 30 ದಿನಗಳ ಕಾಲ ತನ್ನ ತೀರ್ಪನ್ನು ಅಮಾನತಿನಲ್ಲಿಟ್ಟು ಹೈಕೋರ್ಟ್ ಆದೇಶ ಹೊರಡಿಸಿದೆ.

Key words: minister -Zameer Ahmed Khan- High Court -dismissed – petition