ಸಚಿವ ಡಾ.ಕೆ.ಸುಧಾಕರ್ ಹೆಗಲಿಗೆ ಮತ್ತೊಂದು ಮಹತ್ವದ ಜವಾಬ್ದಾರಿ

ಬೆಂಗಳೂರು,ನವೆಂಬರ್,16,2020(www.justknnada.in) ; ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೆಗಲಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಲಾಗಿದೆ.kannada-journalist-media-fourth-estate-under-loss

ಡಾ.ಕೆ.ಸುಧಾಕರ್ ವೈದ್ಯಕೀಯ ಶಿಕ್ಷಣ ಖಾತೆಯೊಂದಿಗೆ ಇತ್ತೀಚೆಗಷ್ಟೇ ಆರೋಗ್ಯ ಖಾತೆ ಜವಾಬ್ದಾರಿ ನೀಡಲಾಗಿತ್ತು.

ಬೃಹತ್ ಹೈದರಾಬಾದ್ ಮಹಾನಗರ ಪಾಲಿಕೆಯಲ್ಲಿ ಗೆಲುವಿಗೆ ಕಾರ್ಯತಂತ್ರ ರೂಪಿಸಿರುವ ಸಚಿವ ಸುಧಾಕರ್ ಮತ್ತು ಬೆಂಗಳೂರಿನ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರನ್ನು ಸಹ-ಪ್ರಭಾರಿಗಳಾಗಿ ನೇಮಕ ಮಾಡಿದೆ.

ಹೈದರಾಬಾದ್ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಮುಂದಾಗಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಚುನಾವಣಾ ಉಸ್ತುವಾರಿಯಾಗಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಅವರನ್ನು ನಿಯೋಜಿಸಿದ್ದಾರೆ.

ಅವರ ಜೊತೆಗೆ ಸಚಿವ ಸುಧಾಕರ್ ಮತ್ತು ಶಾಸಕ ಸತೀಶ್ ರೆಡ್ಡಿ ಅವರನ್ನು ಸಹ-ಪ್ರಭಾರಿಗಳಾಗಿ ನೇಮಕ ಮಾಡಲಾಗಿದೆ.

Minister-Dr.K.Sudhakar-another-great-responsibility 

key words ; Minister-Dr.K.Sudhakar-another-great-responsibility