ಬೆಂಗಳೂರು,ಆಗಸ್ಟ್,3,2026 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸರ್ಕಾರ ಸಜ್ಜಾಗಿದ್ದು ಈಗಾಗಲೇ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದೆ. ಆದರೆ ಕೊನೇ ಕ್ಷಣದಲ್ಲಿ ಸಚಿವರ ಪಟ್ಟಿಯಲ್ಲಿದ್ದ ಮಂಕಾಳು ವೈದ್ಯ ಹೆಸರನ್ನು ತೆಗೆದು ಹಾಕಲಾಗಿದೆ.
ನೂತನ ಸಚಿವರ ಪಟ್ಟಿಯಲ್ಲಿದ್ದ ಮಂಕಾಳು ವೈದ್ಯ ಅವರ ಹೆಸರನ್ನು ತೆಗೆದು ಈ ಹಿಂದೆ ಸಚಿವರಾಗಿದ್ದ ಎಸ್ ಎಸ್ ಮಲ್ಲಿಕಾರ್ಜುನ ಅವರಿಗೆ ಮತ್ತೆ ಅವಕಾಶ ನೀಡಲಾಗಿದೆ. ಕೊನೇ ಕ್ಷಣದಲ್ಲಿ ಮಂಕಾಳು ವೈದ್ಯ ಅವರ ಹೆಸರನ್ನು ಕೈಬಿಟ್ಟು ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನ ಸೇರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಸ್ಪಷ್ಟನೆ ಕೇಳಲು ಮಂಕಾಳು ವೈದ್ಯ ಅವರು ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಮುಂದಾಗಿದ್ದು ಆದರೆ ಸಿಎಂ ಭೇಟಿಗೆ ಅವಕಾಶ ಸಿಕ್ಕಿಲ್ಲ ಎನ್ನಲಾಗಿದೆ. 
ಈ ಕುರಿತಾಗಿ ಸ್ಪಷ್ಟನೆ ನೀಡಿರುವ ಎಐಸಿಸಿ ನೂತನ ಸಚಿವರ ಪಟ್ಟಿಯಲ್ಲಿ ಮಂಕಾಳು ವೈದ್ಯ ಅವರ ಹೆಸರಿರಲಿಲ್ಲ ಇದು ಕೇವಲ ಟೈಪಿಂಗ್ ಮಿಸ್ಟೇಕ್ ಎಂದಿದೆ. ಒಟ್ಟಾರೆ ಇಂದು ಸಂಜೆ 4 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Key words: twist ,ministerial list, Mankalu Vaidya, name, out







