ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು, ಅದ್ರೆ ಸಿಕ್ಕಿಲ್ಲ- ಬಿಜೆಪಿ ಶಾಸಕ…

ಬೆಂಗಳೂರು,ಆ,20,2019(www.justkannada.in): ರಾಜ್ಯ ಸಚಿವ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಆದರೆ ಸಿಕ್ಕಿಲ್ಲ ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್  ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಬಂದು 25 ದಿನಗಳ ಬಳಿಕ ಸಂಪುಟ ರಚನೆ ಮಾಡುತ್ತಿದ್ದು ಇಂದು  17 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.  ಬೆಳಗ್ಗೆ 10.30 ರಿಂದ 11.30 ರ ರೊಳಗೆ ರಾಜಭವನದ ಗಾಜಿನಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಸಂಪುಟದ ಹೊಸ 17 ಶಾಸಕರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಚಿವ ಸ್ಥಾನ ಕೈ ತಪ್ಪಿದ ಕುರಿತು  ಪ್ರತಿಕ್ರಿಯಿಸಿರುವ  ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್.ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು, ಅದ್ರೆ ಸಿಕ್ಕಿಲ್ಲ. ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಸಂಪುಟ ರಚನೆ ಮಾಡಿದೆ. ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರವೇನೂ ಇಲ್ಲ. ಕ್ಷೇತ್ರದ ಮತದಾರರಿಗೆ ವಿನಂತಿ ಮಾಡಿಕೊಳ್ಳುತ್ತೇನೆ. ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.

Key words:  ministerial –position-state cabinet – BJP MLA-bangalore