ಉಪಚುನಾವಣೆಯಲ್ಲಿ ಗೆದ್ದು ಗೆದ್ಧು ಬಂದವರಿಗೆ ಸಚಿವ ಸ್ಥಾನ-ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ…

ಬೆಳಗಾವಿ,ನ,23,2019(www.justkannada.in):  ಉಪಚುನಾವಣೆಯಲ್ಲಿ ಗೆದ್ದುಬಂದವರಿಗೆ ಸಚಿವ ಸ್ಥಾನ ನೀಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದರು.

ಕಾಗವಾಡ‌ ಕ್ಷೇತ್ರದ ಶಿರಗುಪ್ಪಿಯಲ್ಲಿ ಪ್ರಚಾರ ನಡೆಸಿ ಮಾತನಾಡಿದ  ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದವರು ಗೆದ್ದು ಬಂದರೇ ಮಂತ್ರಿ ಸ್ಥಾನ ನೀಡಲಾಗುತ್ತದೆ. ಈ ಶಾಸಕರು ರಾಜೀನಾಮೆ‌ ನೀಡಿದ್ದಕ್ಕಾಗಿ ನಾನು ಮುಖ್ಯಮಂತ್ರಿ ಆಗಿದ್ದೇನೆ.‌ ಅವರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮದು. ಅವರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಲಾಗುವುದು.‌ ಎಲ್ಲರನ್ನೂ ಮಂತ್ರಿ ಮಾಡಲಾಗುವುದು ಎಂದು  ತಿಳಿಸಿದರು.

ಎಲ್ಲ 15ಕ್ಷೇತ್ರಗಳಲ್ಲು ಬಿಜೆಪಿ ಗೆಲ್ಲುತ್ತದೆ.  ಡಿಸಿಎಂ ಲಕ್ಷ್ಮಣ್ ಸವದಿ ಮತ್ತು  ಮಹೇಶ್ ಕುಮುಟಳ್ಳಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲಾ ಮುಗಿದಿದೆ. ಇಬ್ಬರು ಒಟ್ಟುಗೂಡಿ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಬಿಎಸ್ ವೈ ತಿಳಿಸಿದರು. ಹಾಗೆಯೇ ಅನರ್ಹ ಶಾಸಕರಿಗೆ ನಾಲಾಯಕ್ ಎಂಬ ಹೇಳಿಕೆ ವಿಚಾರ  ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ, ಇದಕ್ಕೆ ಜನರೇ ಉತ್ತರ ಕೊಡುತ್ತಾರೆ. ಡಿಸೆಂಬರ್ 9 ರಂದು ಫಲಿತಾಂಶ ಬಂದಾಗ ಇವರಿಗೆ ಗೊತ್ತಾಗುತ್ತದೆ ಎಂದು ನುಡಿದರು.

ನೆರೆ ಸಂತ್ರಸ್ತರಿಗೆ ಎಲ್ಲಾ ರೀತಿಯ ನೆರವು ಕೊಡುತ್ತೇವೆ.  ಯಾರಿಗೆ ನೆರೆಪರಿಹಾರ ಸಿಕ್ಕಿಲ್ಲ ಅವರಿಗೆ ಪರಿಹಾರ ನೀಡಲಾಗುತ್ತದೆ. ಯಾರಿಗೂ ಮೋಸ ಮಾಡುವುದಿಲ್ಲ ಎಂದು ಸಿಎಂ ಬಿಎಸ್ ವೈ ಹೇಳಿದರು.

Key words: Ministerial- position – won -by-election-CM BS Yeddyurappa