Tuesday, October 6, 2026

BDA Apartments

immense respect BDA JK_Adv BDA Adv
Home Front Page ಉಪಚುನಾವಣೆಯಲ್ಲಿ ಸೋತವರಿಗೂ ಮಂತ್ರಿಗಿರಿ ವಿಚಾರ: ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದು ಹೀಗೆ…

ಉಪಚುನಾವಣೆಯಲ್ಲಿ ಸೋತವರಿಗೂ ಮಂತ್ರಿಗಿರಿ ವಿಚಾರ: ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದು ಹೀಗೆ…

ಮೈಸೂರು,ಡಿ,24,2019(www.justkannada.in): ಉಪಚುನಾವಣೆಯಲ್ಲಿ ಸೋತವರಿಗೂ ಮಂತ್ರಿಗಿರಿ ನೀಡುವ ಬಗ್ಗೆ  ಚರ್ಚೆ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಿಂತೆ ಪ್ರತಿಕ್ರಿಯಿಸಿರುವ ವಸತಿ ಸಚಿವ ವಿ.ಸೋಮಣ್ಣ,  ಈಗ ಸಂತೋಷವಾಗಿದ್ದೇನೆ, ಆ ಮಾತು ಹೀಗೇಕೆ ? ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು, ಯಾರನ್ನು ಬಿಡಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ‌ ವಿಚಾರ ಎಂದು ತಿಳಿಸಿದರು.

ನಂಜನಗೂಡಿನಲ್ಲಿ ಇಂದು ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು, ಯಾರನ್ನು ಬಿಡಬೇಕು ಎಂಬುದರ ಬಗ್ಗೆ ಯಡಿಯೂರಪ್ಪ ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾವುದೇ ಹೇಳಿಕೆ ನೀಡದಂತೆ ಎಲ್ಲರಿಗೂ ಸೂಚನೆ ನೀಡಲಾಗಿದೆ. ವಿಶ್ವನಾಥ್ ಅವರನ್ನು ಮಧ್ಯಾಹ್ನ ಭೇಟಿ ಮಾಡಿ ಮಾತನಾಡಿಸುತ್ತೇನೆ ಎಂದರು.

ಪೌರತ್ವ ತಿದ್ದುಪಡಿ ಕಾಯ್ದೆಯ ಬೆಳವಣಿಗೆಗಳಿಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ. ಆದಷ್ಟು ಬೇಗ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಚಿವ ಸೋಮಣ್ಣ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸೋಮಣ್ಣ, ಮೈಸೂರಿನ ಬಗ್ಗೆ ಯಾರಿಗೆ ಪ್ರೀತಿ ಇಲ್ಲ ? ಮೈಸೂರು ಎಂದಾಕ್ಷಣ ಚಾಮುಂಡಿಬೆಟ್ಟ, ಮಹಾರಾಜರು ನೆನಪಾಗುತ್ತದೆ. ಹಿಂದೆ ರಾಜಧಾನಿಯೂ ಆಗಿತ್ತು. ಇಂತಹ ಜಾಗದ ಬಗ್ಗೆ ಎಲ್ಲರಿಗೂ ಪ್ರೀತಿ ಇದ್ದೇ ಇರುತ್ತೆ. ನನಗೂ ಇಲ್ಲಿ ಒಳ್ಳೆಯ ಕೆಲಸ ಮಾಡುವ ಆಸೆ ಇದೆ ಎಂದು ಇಂಗಿತ ವ್ಯಕ್ತಪಡಿಸಿದರು.

Key words: Ministerial  post- by-election- losers-Minister-V. Somanna -mysore