ಬೆಂಗಳೂರು, ಜುಲೈ 14,2026 (www.justkannada.in): ಒಂದು ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂಪಾಯಿ ನಿಗದಿ ಮಾಡಿದ್ದಾರೆ. ಇದು ಪೇಮೆಂಟ್ ಸಚಿವ ಸ್ಥಾನದ ಸರ್ಕಾರ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬರುವ ಸಾಧ್ಯತೆ ಇದೆ, ನಾನೇ 5 ವರ್ಷ ಸಿಎಂ ಅಂತಿದ್ದ ಸಿದ್ದರಾಮಯ್ಯ ಎಲ್ಲಿ ಹೋದರು? ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಬದಲಾಗ್ತಾರೆ ಅಂತಾ ನಾನು ಹೇಳಿದ್ದು ನಿಜ ಆಗಿದೆ. ಸಚಿವರೇ ಇಲ್ಲದೆ ಸದನ ಕರೆಯಲು ಇವರು ಹೊರಟಿದ್ದಾರೆ ಎಂದು ಅಶೋಕ್ ಟೀಕಿಸಿದ್ದಾರೆ.
Key words: Rs 100 to 150 crores, ministerial post, R. Ashok, serious allegations






