ಸಿಎಂ ಬಿಎಸ್ ವೈಗೆ ಕೊರೋನಾ ಹಿನ್ನೆಲೆ: ಡಿಸಿಎಂ ಮತ್ತು ಸಚಿವರಿಬ್ಬರು ಹೋಂ ಕ್ವಾರಂಟೈನ್

ಬೆಂಗಳೂರು,ಆ,3,2020(www.justkannada.in):  ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ  ಕೊರೊನಾ ವೈರಸ್ ದೃಢಪಟ್ಟ ಹಿನ್ನೆಲೆ  ಪ್ರಾಥಮಿಕ ಸಂಪರ್ಕದಲ್ಲಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ  ಹೋಂ ಕ್ವಾರಂಟೈನ್ ಆಗಿದ್ದಾರೆ.Ministers- R. Ashok - Basavaraja Bommai- Home Quarantine.

ಸಿಎಂ ಬಿ.ಎಸ್. ಯಡಿಯೂರಪ್ಪ ಜೊತೆಗೆ ಗೃಹ ಸಚಿವ ಬಸವರಾಜ ಹಲವಾರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಇಂದು ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತದ್ದು, ಇನ್ನು ಬಸವರಾಜ ಬೊಮ್ಮಾಯಿ ಅವರು ಹೋಂ ಕ್ವಾರಂಟೈನ್ ಆಗಿದ್ದಾರೆ.Ministers- R. Ashok - Basavaraja Bommai- Home Quarantine.

ಹಾಗೆಯೇ  ಸಿಎಂ ಪ್ರಾಥಮಿಕ ಸಂಪರ್ಕದಲ್ಲಿದ್ದ ಹಿನ್ನೆಲೆ ಕಂದಾಯ ಸಚಿವ ಆರ್.ಅಶೋಕ್ ಸಹ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಡಿಸಿಎಂ ಗೋವಿಂದ ಕಾರಜೋಳ, ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಕಮಲ್ ಪಂತ್ ಸಹ ಸ್ವಯಂ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

Key words: Ministers- R. Ashok – Basavaraja Bommai- Home Quarantine.