18 ಶಾಸಕರಿಗೆ ಸಚಿವ ಸ್ಥಾನ ಸಾಧ್ಯತೆ: ಸಂಭವನೀಯ ಪಟ್ಟಿ ಹೀಗಿದೆ..?

ಬೆಂಗಳೂರು,ಮೇ,25,2023(www.justkannada.in):  ಸಚಿವ ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿದ್ದು ಸಿಎಂ ಸಿದ್ಧರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್ ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿ ಸಭೆ ನಡೆಸುತ್ತಿದ್ದಾರೆ.

18 ಶಾಸಕರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ನಾಳೆ ಅಥವಾ ನಾಡಿದ್ದು ಸಚಿವ ಪ್ರಮಾಣವಚನ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಚಿವರ ಪಟ್ಟಿ ಫೈನಲ್ ಮಾಡಲು ಸಿಎಂ ಸಿದ್ಧರಾಮಯ್ಯ. ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್  ತೀವ್ರ ಕಸರತ್ತು ನಡೆಸುತ್ತಿದ್ದಾರೆ.

ಸಂಭವನೀಯ ಸಚಿವರ ಪಟ್ಟಿಯಲ್ಲಿ  ಬಸವರಾಜ ರಾಯರೆಡ್ಡಿ, ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, S.S.ಮಲ್ಲಿಕಾರ್ಜುನ, ಈಶ್ವರ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್​, ಶಿವಾನಂದ ಪಾಟೀಲ್, ಶರಣಬಸಪ್ಪ ದರ್ಶನಾಪುರ,  ಶಿವರಾಜ ತಂಗಡಗಿ, ಭೈರತಿ ಸುರೇಶ್, ಕೃಷ್ಣ ಭೈರೇಗೌಡ, ರಹೀಂ ಖಾನ್​, ಡಾ.ಅಜಯ್ ಸಿಂಗ್, ಸಿ.ಪುಟ್ಟರಂಗಶೆಟ್ಟಿ​, ಪಿ.ಎಂ.ನರೇಂದ್ರಸ್ವಾಮಿ, ಎಂ.ಸಿ.ಸುಧಾಕರ್​, ಡಿ.ಸುಧಾಕರ್, ಹೆಚ್.ಕೆ.ಪಾಟೀಲ್, ಎನ್.ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ ಅಥವಾ ಬಿ.ನಾಗೇಂದ್ರಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಿಎಂ ಸಿದ‍್ಧರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಅವರನ್ನ ಭೇಟಿಯಾಗಲಿದ್ದು  ನಂತರ ಮೂರ್ನಾಲ್ಕು ಹೆಸರು ಬದಲಾಗುವ ಸಾಧ್ಯತೆ ಇದೆ. ದಿನೇಶ್ ಗುಂಡೂರಾವ್, ಆರ್.ವಿ.ದೇಶಪಾಂಡೆ, ಬಿ.ಕೆ.ಹರಿಪ್ರಸಾದ್ ಹೆಸರು ಸೇರ್ಪಡೆಯಾಗುವ ಸಾಧ್ಯತೆ ಇದೆ.

Key words: Ministership- possible – 18 MLAs-congress