ನನಗೆ ಸಚಿವ ಸ್ಥಾನ ನೀಡಿದ್ದಾರೆ- ಶಾಸಕ ಮುರುಗೇಶ್ ನಿರಾಣಿ….

ಬೆಂಗಳೂರು,ಜನವರಿ,13,2021(www.justkannada.in):  ನನಗೆ ಸಚಿವ ಸ್ಥಾನ ನೀಡಿದ್ದಾರೆ. ಸಚಿವ ಸ್ಥಾನ ನೀಡಿದ್ದಕ್ಕೆ ಧನ್ಯವಾದಗಳು. ನನಗೆ ಯಾವುದೇ ಇಲಾಖೆ ಕೊಟ್ಟರೂ ಕೆಲಸ ಮಾಡುತ್ತೇನೆ ಎಂದು ಶಾಸಕ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.jk-logo-justkannada-mysore

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಮುರುಗೇಶ್ ನಿರಾಣಿ,  ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಸಚಿವರ ಪಟ್ಟಿಯಲ್ಲಿ ನನ್ನ ಹೆಸರಿದೆ ಅನ್ನೋದು ಗೊತ್ತಾಗಿದೆ. ಸಚಿವ ಸ್ಥಾನ ನೀಡಿದ್ದಕ್ಕೆ ಸಿಎಂಗೆ ಧನ್ಯವಾದ ಅರ್ಪಿಸುತ್ತೇನೆ. ಪಕ್ಷದಲ್ಲಿ ದುಡಿದವರಿಗೆ ಅವಕಾಶ ಕೊಡ್ತಾರೆ ಎಂದು ಗೊತ್ತಿತ್ತು. ನನಗೆ ಯಾವುದೇ ಖಾತೆ ನೀಡಿದರೂ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.ministrial-position-mla-murugesh-nirani-department

Key words: ministrial position-MLA-Murugesh nirani-department