ಪೌರತ್ವ ಕಾಯ್ದೆ ವಿಚಾರದಲ್ಲಿ ಪ್ರತಿಪಕ್ಷಗಳಿಂದ ದಾರಿತಪ್ಪಿಸುವ ಕೆಲಸ: ಜನರು ಊಹಾಪೋಹಗಳಿಗೆ ಕಿವಿಕೊಡಬಾರದು- ಡಿಸಿಎಂ ಅಶ್ವಥ್ ನಾರಾಯಣ್ ಹೇಳಿಕೆ…

ಮೈಸೂರು,ಡಿ,22,2019(www.justkannada.in):  ಪೌರತ್ವ ಕಾಯ್ದೆ ವಿಚಾರದಲ್ಲಿ ಪ್ರತಿಪಕ್ಷಗಳು ಕೆಲ ವರ್ಗದವರನ್ನು ದಾರಿತಪ್ಪಿಸುತ್ತಿವೆ. ಜನರು ಊಹಾಪೋಹಗಳಿಗೆ ಕಿವಿಕೊಡಬಾರದು ಎಂದು ಡಿಸಿಎಂ ಅಶ್ವಥ್ ನಾರಾಯಣ್  ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಪೌರತ್ವ ಕಾಯ್ದೆ ವಿಚಾರದಲ್ಲಿ ಪ್ರತಿಪಕ್ಷಗಳು ಜನರನ್ನ ದಾರಿತಪ್ಪಿಸುತ್ತಿವೆ. ಪಟ್ಟಭದ್ರ ಹಿತಾಸಕ್ತಿಗಳು ಈ ರೀತಿಯ ಕೆಲಸ ಮಾಡ್ತಿವೆ. ಈಬಗ್ಗೆ ಅಲ್ಪ ಸಂಖ್ಯಾತರಿಗೆ ಯಾವುದೇ ಆತಂಕ ಬೇಡ. ಹೊರ ದೇಶಗಳಿಂದ ಬಂದಿರುವ ಅಕ್ರಮ ವಲಸಿಗರಿಗೆ ಈ ಕಾಯ್ದೆ ಅನ್ವಯವಾಗುತ್ತೆ. ಈ ಕಾಯ್ದೆ ವಿಚಾರದಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ದುರುದ್ದೇಶದಿಂದ ಕೆಲವು ಸಮುದಾಯಗಳನ್ನು ತಪ್ಪುದಾರಿಗೆ ಕೊಂಡೊಯ್ಯಲಾಗುತ್ತಿದೆ. ಜನರು ಊಹಾಪೋಹಗಳಿಗೆ ಕಿವಿಕೊಡಬಾರದು. ನೆರೆ ದೇಶಗಳಲ್ಲಿ ದೌರ್ಜನ್ಯಕ್ಕೊಳಗಾಗಿರುವ ಹಿಂದೂಗಳನ್ನು ರಕ್ಷಣೆ ಮಾಡಬೇಕಿದೆ. ಹಾಗಾಗಿ ಈ ಕಾಯ್ದೆ ಮೂಲಕ ಅವರಿಗೆ ನ್ಯಾಯ ನೀಡಲಾಗುತ್ತಿದೆ. 2014ರ ಮುಂಚೆ ಬಂದಿರುವ ವಲಸಿಗರಿಗೆ ಪೌರತ್ವ ನೀಡಲಾಗುವುದು ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಅಶ್ವಥ್ ನಾರಾಯಣ್,  ಇವತ್ತು ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಅವರಿಗೆ ಸ್ಥಾನಮಾನ ನೀಡುವ ವಿಚಾರವಾಗಿ ಸಿಎಂ ತೀರ್ಮಾನ ಕೈಗೊಳ್ಳುತ್ತಾರೆ.ಡಿಸಿಎಂ ಹುದ್ದೆಗೆ ಆಕಾಂಕ್ಷಿಗಳ ಪಟ್ಟಿ ಹೆಚ್ಚಿದ ವಿಚಾರ ಸಂಬಂಧ ಇದು ಪಕ್ಷದ ವರಿಷ್ಠರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನಾವು ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುತ್ತೆವೆ ಎಂದು ತಿಳಿಸಿದರು.

Key words: misguided work Opposition party -Citizenship Act-mysore- DCM Ashwath Narayan