Friday, August 21, 2026

BDA Apartments

Home Front Page ಗ್ಯಾರಂಟಿ ಯೋಜನೆಗಳ ಜಾರಿಗೆ ಕಂಡೀಷನ್ ಹಾಕಿರುವ ಸರ್ಕಾರದ ವಿರುದ್ಧ ಶಾಸಕ ಅಶ್ವಥ್ ನಾರಾಯಣ್ ಟೀಕೆ.

ಗ್ಯಾರಂಟಿ ಯೋಜನೆಗಳ ಜಾರಿಗೆ ಕಂಡೀಷನ್ ಹಾಕಿರುವ ಸರ್ಕಾರದ ವಿರುದ್ಧ ಶಾಸಕ ಅಶ್ವಥ್ ನಾರಾಯಣ್ ಟೀಕೆ.

ಬೆಂಗಳೂರು,ಜೂನ್,7,2023(www.justkannada.in): ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ಐದು ಗ್ಯಾರಂಟಿ ಯೋಜನೆಳಿಗೆ ಕಂಡೀಷನ್ ಹಾಕಿರುವ ಬಗ್ಗೆ ಶಾಸಕ ಅಶ್ವಥ್ ನಾರಾಯಣ್  ಟೀಕೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಅಶ್ವಥ್ ನಾರಾಯಣ್,  ಮೊದಲು ಎಲ್ಲಾ ಗೃಹಿಣಿಯರಿಗೆ ₹2 ಸಾವಿರ ಕೊಡ್ತೀವಿ ಎಂದಿದ್ದರು. ಆದರೆ ಈಗ ಗೃಹ ಲಕ್ಷ್ಮೀ ಯೋಜನೆಗೆ ಕಂಡಿಷನ್ ಹಾಕುತ್ತಿದ್ದಾರೆ. ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ನಿಮಗೂ ಫ್ರಿ, ನಮಗೂ ಫ್ರಿ ಎಂದಿದ್ದರು. ಇದೀಗ ಎಲ್ಲದಕ್ಕೂ ಷರತ್ತು ವಿಧಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಎಪಿಎಲ್, ಬಿಪಿಎಲ್ ಕಾರ್ಡ್ ಇರುವ ಮಹಿಳೆಯರಿಗೆ 2 ಸಾವಿರ ರೂ. ಕೊಡ್ತೀವಿ ಎಂದಿದ್ದರು. ಈಗ ಆದಾಯ ತೆರಿಗೆ ಪಾವತಿಸುತ್ತಿದ್ದರೆ ಹಣ ಸಿಗುವುದಿಲ್ಲ ಎನ್ನುವ ಷರತ್ತು ವಿಧಿಸಿದ್ದಾರೆ. ಕಾಂಗ್ರೆಸ್​ನವರು ಮಾತಿಗೆ ತಪ್ಪುತ್ತಿರೋದು ಸರಿಯಲ್ಲ. ಮಹಿಳೆಯರು, ನಾಗರಿಕರ ಪರವಾಗಿ ನಾವು ಹೋರಾಟ ಮಾಡ್ತೇವೆ  ಎಂದು ಅಶ್ವಥ್ ನಾರಾಯಣ್ ಹೇಳಿದರು.

Key words: MLA -Aswath Narayan -criticizes – government –conditions-guarantee schemes.