ಬೆಂಗಳೂರು,ಜುಲೈ,16,2025 (www.justkannada.in): ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ವಿರುದ್ಧ ಎಫ್ ಐಆರ್ ದಾಖಲಾಗಿದ್ದು ಶಾಸಕ ಬೈರತಿ ಬಸವರಾಜ್ ಅವರನ್ನು ಎ5 ಆರೋಪಿ ಎಂದು ಉಲ್ಲೇಖಿಸಲಾಗಿದೆ.
ಬಿಕ್ಲು ಶಿವ ಕೊಲೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಬೈರತಿ ಬಸವರಾಜ್ ವಿರುದ್ದ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ.
ಈ ಕುರಿತು ಮಾತನಾಡಿ ಸ್ಪಷ್ಟನೆ ನೀಡಿರುವ ಶಾಸಕ ಭೈರತಿ ಬಸವರಾಜು, ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಆತ ಯಾರೆಂಬುದೂ ನನಗೆ ಗೊತ್ತಿಲ್ಲ . ಉದ್ದೇಶಪೂರ್ವಕವಾಗಿ ನನ್ನ ವಿರುದ್ದ ಎಫ್ ಐಆರ್ ದಾಖಲಾಗಿದೆ ಎಂದರು.
ಕೊಲೆಯಾದವನ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ದೂರು ಕೊಟ್ಟ ತಕ್ಷಣ ಏಕಾಏಕಿ ನನ್ನ ವಿರುದ್ದ ಕೇಸ್ ದಾಖಲಿಸಿದ್ದಾರೆ. ಈ ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಯಾರೇ ದೂರು ಕೊಟ್ಟರೂ ಎಫ್ ಐಆರ್ ದಾಖಲಿಸಬಹುದಾ ಎಫ್ ಐಆರ್ ದಾಖಲಿಸುವುದಕ್ಕೂ ಮುನ್ನ ನನಗೆ ಮಾಹಿತಿ ನೀಡಿದ್ದಾರಾ? ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದು ಶಾಸಕ ಭೈರತಿ ಬಸವರಾಜ್ ತಿಳಿಸಿದ್ದಾರೆ.
Key words: Murder case, FIR, against, MLA, Bairati Basavaraj