ಬೆಂಗಳೂರು,ನವೆಂಬರ್,22,2025 (www.justkannada.in): ಅಧಿಕಾರ ಹಂಚಿಕೆ ಸಮಸ್ಯೆಯನ್ನ ಹೈಕಮಾಂಡ್ ಇತ್ಯರ್ಥಪಡಿಸಬೇಕು ಇಲ್ಲದಿದ್ದರೆ ಪಕ್ಷದಲ್ಲಿ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುತ್ತದೆ ಎಂದು ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಾಲಕೃಷ್ಣ, ಡಿಕೆ ಶಿವಕುಮಾರ್ ಗೆ ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಬೇಕು. ಅಧಿಕಾರ ಹಂಚಿಕೆ ಸಮಸ್ಯೆ ಹೈಕಮಾಂಡ್ ಬಗೆಹರಿಸದಿದ್ದರೆ. ಪಕ್ಷದಲ್ಲಿ ಕಾರ್ಯಕರ್ತರಲ್ಲಿ ಗೊಂದಲವುಂಟಾಗುತ್ತದೆ ಎಂದರು.
ಶಾಸಕರು ದೆಹಲಿಗೆ ಗುಂಪು ಕಟ್ಟಿಕೊಂಡು ಹೋಗಿಲ್ಲ. ಕೇವಲ ಮೂರ್ನಾಲ್ಕು ಶಾಸಕರು ಹೋಗಿದ್ದಾರೆ. ಗುಂಪು ಕಟ್ಟಿಕೊಂಡು ಅಂದರೆ 15 ಶಾಸಕರು ಇರಬೇಕು. ಶಾಸಕರೆಲ್ಲಾ ಅವರ ಕೆಲಸಕ್ಕೆ ಹೋಗಿದ್ದಾರೆ. ಅಧಿಕಾರ ಹಂಚಿಕೆ ಶಾಸಕರ ನಂಬರ್ ಗೇಮ್ ಮೇಲೆ ನಿಂತಿಲ್ಲ. ಹೈಕಮಾಂಡ್ ತೀರ್ಮಾನದ ಮೇಲೆ ನಿಂತಿದೆ ಎಂದರು.
Key words: high command, power sharing,confusion, MLA, Balakrishna







