ಸಿಎಂ ಸ್ಥಾನಕ್ಕೆ 2500 ಕೋಟಿ ಹೇಳಿಕೆ ಬಗ್ಗೆ ಯು ಟರ್ನ್ ಹೊಡೆದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ,ಮೇ,7,2022(www.justkannada.in):  ನಿಮ್ಮನ್ನು ಸಿಎಂ ಮಾಡುತ್ತೇವೆ 2,500 ಕೋಟಿ ರೂ. ಕೊಡಿ ಎಂದು ದೆಹಲಿಯಂದ ಬಂದವರು ಕೇಳಿದ್ದರು ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಇದೀಗ ಯುಟರ್ನ್​ ಹೊಡೆದಿದ್ದಾರೆ.

ಹಣ ಪಡೆದು ಸಿಎಂ ಸ್ಥಾನ ನೀಡುವ ಸಂಸ್ಕೃತಿ ಬಿಜೆಪಿಯಲ್ಲಿಲ್ಲ. ಹಣ ಪಡೆದು ಸ್ಥಾನ ನೀಡುವ ಸಂಸ್ಕೃತಿ ಕಾಂಗ್ರೆಸ್‌ ಪಕ್ಷದಲ್ಲಿದೆ ಎಂದು ಹೇಳುವ ಮೂಲಕ ಶಾಸಕ ಯತ್ನಾಳ್ ಯುಟರ್ನ್ ಹೊಡೆದಿದ್ದಾರೆ.

ವಿಜಯಪುರದಲ್ಲಿ ಇಂದು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಹಣ ಪಡೆದು ಸಿಎಂ ಸ್ಥಾನ ನೀಡುವ ಸಂಸ್ಕೃತಿ ಬಿಜೆಪಿಯಲ್ಲಿಲ್ಲ. ಹಣ ಪಡೆದು ಸ್ಥಾನ ನೀಡುವ ಸಂಸ್ಕೃತಿ ಕಾಂಗ್ರೆಸ್‌ ಪಕ್ಷದಲ್ಲಿದೆ. ಬಿಜೆಪಿಯಲ್ಲಿ ಅರ್ಹತೆ ಮೇಲೆಯೇ ಸ್ಥಾನಮಾನವನ್ನು ನೀಡುತ್ತಾರೆ. 1-2 ಘಟನೆ ಬಿಟ್ಟರೆ ನೂರಕ್ಕೆ ನೂರರಷ್ಟು ಅರ್ಹರಿಗೆ ಸ್ಥಾನ ನೀಡಲಾಗಿದೆ. ವರಿಷ್ಠರ ನಿರ್ಧಾರದ ಮೇಲೆಯೇ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದು ಎಂದು ತಿಳಿಸಿದ್ದಾರೆ.

ಇದೇ ವೇಳೆ ಡಿ.ಕೆ ಶಿವಕುಮಾರ್ ವಿರುದ್ಧ ಗುಡುಗಿದ ಯತ್ನಾಳ್, ಡಿ.ಕೆ.ಶಿವಕುಮಾರ್ ​ಗೆ ನನ್ನ ಕಂಡರೆ ಭಯ.ನನ್ನ ಮೇಲೆ 200 ಕೋಟಿ ರೂ. ಮಾನಹಾನಿ ಕೇಸ್​ ಹಾಕಿದ್ದಾರೆ. ಮಾನಹಾನಿ ಕೇಸ್​ ಹಾಕಿದ್ದಾಗಿನಿಂದಲೂ ಡಿಕೆಶಿಗೆ ಭಯ ಹೆಚ್ಚಾಗಿದೆ. ರಾಜ್ಯದಲ್ಲಿ ದೊಡ್ಡ ಬದಲಾವಣೆ ಆಗುತ್ತೆ ಅದಕ್ಕೆ ಡಿಕೆಶಿಗೆ ಭಯ. ಯತ್ನಾಳ್​​ ಬಂದುಬಿಟ್ಟರೆ ನಮ್ಮ ಗತಿಯೇನು ಎಂಬ ಭಯವಿದೆ. ಸಚಿವ ಸ್ಥಾನ ತಪ್ಪಿಸಲು ಷಡ್ಯಂತ್ರ ಮಾಡಿದ್ದಾರೆ.  ಅದಾಗ್ಯೂ ಡಿಕೆಶಿ ಏನೇ ಮಾಡಿದರೂ ಅಂಜುವ ಮಗ ನಾನಲ್ಲ ಎಂದು ಹೇಳಿದರು.

ಪಿಎಸ್ ಐ ಹಗರಣದಲ್ಲಿ ಮಾಜಿ ಸಿಎಂ ಪುತ್ರ ಇದ್ದಾರೆ ಎಂಬ ಹೆಚ್.ಡಿಕೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಯತ್ನಾಳ್, ಮಾಜಿ ಸಿಎಂ ಪುತ್ರ ಯಾರೇಂದು ಹೇಳಲಿ. ಎಲ್ಲದರ ಬಗ್ಗೆಯೂ ಚರ್ಚೆಯಾಗಬೇಕು.  ಇಂತಹ ಎಷ್ಟೇ ಹಗರಣಗಳಿದ್ದರೂ ಹೊರಗೆ ಬಂದು  ಜನರಿಗೆ ನ್ಯಾಯ ಸಿಗಲಿ ಎಂದರು.

Key words: MLA-Basanagouda Patil Yatnal- scored – U turn – CM’s- 2500 crore- statement.