ಬೇಕಾದ್ರೆ ರಾಜೀನಾಮೆ ನೀಡುವೆ, ಕ್ಷಮೆ ಕೇಳಲ್ಲ- ವಿಷಕನ್ಯೆ ಹೇಳಿಕೆ ಸಮರ್ಥಿಸಿಕೊಂಡ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.

ಹುಬ್ಬಳ್ಳಿ,ಮೇ,1,2023(www.justkannada.in):  ಪ್ರಧಾನಿ ನರೇಂದ್ರ ಮೋದಿ ಅವರು ಸರ್ಪವಿದ್ದಂತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಬಳಿಕ ಸೋನಿಯಾ ಗಾಂಧಿ ವಿಷಕನ್ಯೆ ಎಂದಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೆ ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಷಸರ್ಪ ಎಂದಿದ್ದಕ್ಕೆ ವಿಷಕನ್ಯೆ ಎಂದಿದ್ದೇನೆ, ನಾನು ಕ್ಷಮೆ ಕೇಳಲ್ಲ. ದೊರೆಸ್ವಾಮಿ ನಾಟಕ‌ ಕಂಪನಿಗೆ ಕಾಂಗ್ರೆಸ್ ಏಜೆಂಟ್ ಅಂದಿದ್ದೆ. ನಾನು ರಾಜೀನಾಮೆ ಕೊಡ್ತೀನಿ, ಕ್ಷಮೆ ಕೇಳಲ್ಲ ಎಂದರು.a

ಪ್ರಧಾನಿ ಮೋದಿಯವರನ್ನ ಕಾಂಗ್ರೆಸ್ ನವರು 91 ಸಾರಿ ಬೈದಿದ್ದಾರೆ. ಹೀಗಾಗಿ ಅವರು ವಿಷ ಸರ್ಪ ಅಂದಾಗ ನಾನು ವಿಷಕನ್ಯೆ ಎಂದಿದ್ದೇನೆ ಎಂದು ಬಸನಗೌಡ ಪಾಟೀಲ್​ ಯತ್ನಾಳ ಹೇಳಿದ್ದಾರೆ.

Key words: MLA -Basanagowda Patil Yatnal -defended –Vishakanye- statement.