ದೊರೆಸ್ವಾಮಿ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಖಂಡನೆ : ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ….

ಬೆಂಗಳೂರು,ಫೆ,26,2020(www.justkannada.in):  ಸ್ವಾತಂತ್ರ ಹೋರಾಟಗಾರ ದೊರೆಸ್ವಾಮಿ ಅವರ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ್ದ ಹೇಳಿಕೆಯನ್ನ ಖಂಡಿಸಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಮಾಜಿ ಡಿಸಿಎಂ ಪರಮೇಶ್ವರ್, ಮಾಜಿಸ್ಪೀಕರ್ ರಮೇಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಗಾಂಧಿ ಟೋಪಿ ಹಾಕಿ ಸಿದ್ದರಾಮಯ್ಯ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬಸನಗೌಡ ಪಾಟೀಲ್ ಗೆ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ ಕಾಂಗ್ರೆಸ್ ನಾಯಕರು ಬಸನಗೌಡ ಪಾಟೀಲ್ ಯತ್ನಾಳ್ ಶಾಸಕತ್ವ ರದ್ಧುಗೊಳಿಸುವಂತೆ ಆಗ್ರಹಿಸಿದರು. ನಿನ್ನೆ ಮಾಧ್ಯಮಗಳ ಜತೆ ಮಾತನಾಡಿದ್ದ ಯತ್ನಾಳ್,   ದೊರೆಸ್ವಾಮಿ ನಕಲಿ ಸ್ವಾತಂತ್ರ ಹೋರಾಟಗಾರ. ಪಾಕ್ ಏಜೆಂಟ್ ರೀತಿ ಮಾತನಾಡುತ್ತಿದ್ದಾರೆ ಎಂದಿದ್ದರು. ಅಲ್ಲದೆ ಇಂದು ಸಹ ಮಾತನಾಡಿ, ಹೇಳಿಕೆಯನ್ನ ವಾಪಸ್ ಪಡೆಯಲ್ಲ ಎಂದಿದ್ದಾರೆ.

Key words: MLA basanagowda Patil Yatnal- statement – Doreswamy- Protest – congress- bangalore