ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗಲ್ಲ- ಬಸವರಾಜ ರಾಯರೆಡ್ಡಿ

ಕೊಪ್ಪಳ, ನವೆಂಬರ್,24,2025 (www.justkannada.in):  ಸಿಎಂ ಸಿದ್ದರಾಮಯ್ಯ ಬಜೆಟ್‍ ಮಂಡನೆಗೆ ಸಿದ್ದತೆ ಮಾಡಿಕೊಳ್ಳಲು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಮತ್ತು ಶಾಸಕ ಬಸವರಾಜ ರಾಯರೆಡ್ಡಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ರಾಯರೆಡ್ಡಿ, ಡಿಕೆ ಶಿವಕುಮಾರ್ ನಾನು ಸಿಎಂ ಆಗ್ತೀನಿ ಎಂದು ಎಲ್ಲೂ ಹೇಳಿಲ್ಲ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಅಧಿಕಾರ ಹಂಚಿಕೆ  ಬಗ್ಗೆ ಗೊತ್ತಿಲ್ಲ ಎಂದರು.

ದಲಿತ ಸಿಎಂ ಕೂಗು ವಿಚಾರ ಕುರಿತು ಪ್ರತಿಕ್ರಿಯಿಸಿದ ಬಸವರಾಜ ರಾಯರೆಡ್ಡಿ, ಲಿಂಗಾಯತ ಕೋಟಾದಲ್ಲಿ ನಾನ್ಯಾಕೆ ಸಿಎಂ ಆಗಬಾರದು? ಆದರೇ ಅದನ್ನ ಹೇಳಲು ಆಗಲ್ಲ. ಈಗ ಸಿದ್ಧರಾಮಯ್ಯ ಸಿಎಂ ಆಗಿದ್ದಾರೆ. ಸಿದ್ಧರಾಮಯ್ಯ ಬಜೆಟ್ ಸಿದ್ದತೆ ಮಾಡಲು ಸೂಚಿಸಿದ್ದಾರೆ. ಪಕ್ಷದಲ್ಲಿ ಸಿಎಂ ಆಗುವಂತ ನಾಯಕರು ಬಹಳ ಇದ್ದಾರೆ ಎಂದರು.

ನನ್ನ ಪ್ರಕಾರ ಅಧಿಕಾರ ಹಂಚಿಕೆ ಚರ್ಚೆಯೇ ಅರ್ಥಹೀನ. ಸಿದ್ಧರಾಮಯ್ಯ ಐದು ವರ್ಷ  ಸಿಎಂ ಆಗಿ ಇರುತ್ತಾರೆ. ಸಿಎಲ್ ಪಿ ಸಭೆಯಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಯಾರೂ ಹೇಳಿಲ್ಲ ಎಂದರು.

Key words: no change CM, state, MLA, Basavaraja Rayareddy