ಬೆಂಗಳೂರು,ಆಗಸ್ಟ್,13,2025 (www.justkannada.in): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಗೆ ಮಧ್ಯಂತರ ರಿಲೀಫ್ ಸಿಕ್ಕಿದೆ.
ಪ್ರಕರಣ ಸಂಬಂಧ ಶಾಸಕ ಭೈರತಿ ಬಸವರಾಜು ವಿರುದ್ದ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಪ್ರಕರಣದ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಧೀಶ ಅರುಣ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಅಲ್ಲದೆ ತನಿಖೆಗೆ ಸಹಕರಿಸುವಂತೆ ಭೈರತಿ ಬಸವರಾಜುಗೆ ಸೂಚನೆ ನೀಡಿದೆ.
ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಚುರುಕುಗೊಳಿಸಿದ್ದು ಪ್ರಮುಖ ಆರೋಪಿ ಜಗದೀಶ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದೆ.
Key words: Rowdy-sheeter, murder case, Relief , MLA ,Bhairati Basavaraj