ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಸಂಕಷ್ಟ

ಬೆಂಗಳೂರು, ಡಿಸೆಂಬರ್, 19,2025 (www.justkannada.in):  ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದ್ದು, ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಪ್ರಕರಣ ಸಂಬಂಧ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಪೀಠವು ಶಾಸಕ ಭೈರತಿ ಬಸವರಾಜು ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ.  ಪ್ರಕರಣಕ್ಕೆ ಕೋಕಾ (KCOCA) ಕಾಯ್ದೆ ಅನ್ವಯಿಸುವುದಿಲ್ಲ. ವಿಚಾರಣಾ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲಿಯವರೆಗೂ ಬಂಧನದಿಂದ ರಕ್ಷಣೆ ನೀಡಲು ನ್ಯಾಯಪೀಠ ನಿರಾಕರಿಸಿದೆ.

ಈ ಹಿನ್ನೆಲೆಯಲ್ಲಿ  ಶಾಸಕ ಭೈರತಿ ಬಸವರಾಜು ಬಂಧನ ಭೀತಿಯನ್ನು ಎದುರಾಗಿದೆ. ಇನ್ನೊಂದೆಡೆ, ಕೋಕಾ ಕಾಯ್ದೆ ರದ್ದಾಗಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿರುವ ಇತರ ಆರೋಪಿಗಳಿಗೆ ಜಾಮೀನು ಸಿಗುವ ಸಾಧ್ಯತೆ ಇದೆ.

Key words: Biklu Shiva, murder case, MLA, Bhairati Basavaraju