Tuesday, August 4, 2026

BDA Apartments

Home Front Page ಶಾಸಕ ಸಿ.ಟಿ. ರವಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಶಾಸಕ ಸಿ.ಟಿ. ರವಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಬೆಂಗಳೂರು, ಏಪ್ರಿಲ್ 16, 2023 (www.justkannada.in): ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಶಾಸಕ ಸಿ.ಟಿ. ರವಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡ ಕಾರಣ, ಸಿ.ಟಿ.ರವಿ ಕೂಡಲೇ ಅಲ್ಲಿಂದ ನೇರವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಿಡ್ನಿ ಸ್ಟೋನ್‌ನಿಂದ ಹೊಟ್ಟೆ ನೋವು ಬಂದಿದೆ. ಅವರನ್ನು 11 ಗಂಟೆ ಬಳಿಕ ಡಿಸ್ಚಾರ್ಜ್ ಮಾಡಲಾಗುತ್ತದೆ. ಮತ್ತೊಂದು ದಿನ ಅವರು ವಿಶ್ರಾಂತಿಯಲ್ಲಿರಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಚಿಕ್ಕಮಗಳೂರು ನಗರದ ಕಾಂಗ್ರೆಸ್‌ ಮಾಜಿ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಅವರ ಆಶ್ರಯ ಆಸ್ಪತ್ರೆಗೆ ಸಿ.ಟಿ. ರವಿ ಅವರನ್ನು ದಾಖಲು ಮಾಡಲಾಗಿದೆ.