Sunday, September 27, 2026

BDA Apartments

ಜಮೀನಿನ ಭೂ ಮಾಲೀಕರಿಂದಲೇ ಸ್ಪಷ್ಟನೆ: ನಾವು ಯಾವುದೇ ಅಕ್ರಮ ಮಾಡಿಲ್ಲ- ಶಾಸಕ ಜಿ....
Home Front Page ಜಮೀನಿನ ಭೂ ಮಾಲೀಕರಿಂದಲೇ ಸ್ಪಷ್ಟನೆ: ನಾವು ಯಾವುದೇ ಅಕ್ರಮ ಮಾಡಿಲ್ಲ- ಶಾಸಕ ಜಿ.ಟಿ ದೇವೇಗೌಡ

ಜಮೀನಿನ ಭೂ ಮಾಲೀಕರಿಂದಲೇ ಸ್ಪಷ್ಟನೆ: ನಾವು ಯಾವುದೇ ಅಕ್ರಮ ಮಾಡಿಲ್ಲ- ಶಾಸಕ ಜಿ.ಟಿ ದೇವೇಗೌಡ

ಮೈಸೂರು,ಫೆಬ್ರವರಿ,1,2025 (www.justkannada.in): ತಮ್ಮ ವಿರುದ್ದ ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ದೂರು ನೀಡಿದ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಜಿ.ಟಿ ದೇವೇಗೌಡ, ಜಮೀನಿನ ಭೂ ಮಾಲೀಕರೇ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಜಿಟಿ ದೇವೇಗೌಡ, ಹರೀಶ್ ಗೌಡ ಪಾತ್ರ ಇಲ್ಲ ಎಂದಿದ್ದಾರೆ. ನಾವು ಯಾವುದೇ ಅಕ್ರಮ ಮಾಡಿಲ್ಲ ಎಂದರು.ಜಮೀನಿನ ಭೂ ಮಾಲೀಕರಿಂದಲೇ ಸ್ಪಷ್ಟನೆ nypunya1

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ, ಮುಡಾದಲ್ಲಿ ಅಕ್ರಮ ಮಾಡಿರೋರ ವಿಚಾರ ಆಚೆ ಬರ್ತಿಲ್ಲ. ಅಕ್ರಮ ಮಾಡದೇ ಇರೋರರ ಬಗ್ಗೆ ಪ್ರತಿನಿತ್ಯ ಚರ್ಚೆ ಆಗುತ್ತಿದೆ. ಮೈಸೂರು ಮಹಾರಾಜರು ಕಟ್ಟಿದ ಮುಡಾದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತಗೊಂಡಿದೆ. ಮುಡಾದಲ್ಲಿ ಸಾರ್ವಜನಿಕರ ಕೆಲಸ ಆಗಬೇಕು. ಮುಡಾ ಅಭಿವೃದ್ಧಿ ಆಗಬೇಕು. ಈಗಾಗಲೇ ಲೋಕಾಯುಕ್ತ, ಇಡಿ, ಸರ್ಕಾರ ನೇಮಕ ಮಾಡಿರುವ ತನಿಖಾ ಸಂಸ್ಥೆಯಿಂದ ತನಿಖೆ ನಡೆಯುತ್ತಿದೆ. ಸತ್ಯಾಸತ್ಯತೆ ಆಚೆ ಬರಬೇಕಿದೆ ಎಂದರು.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರ ಕುರಿತು ಪ್ರತಿಕ್ರಿಯಿಸಿದ ಜಿ.ಟಿ ದೇವೇಗೌಡ, ಕೊರೋನಾ ವೈರಸ್ ನಂತೆ ಮೈಕ್ರೋ ಫೈನಾನ್ಸ್ ಹರಡಿದೆ. ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿದೆ. ರಾಜ್ಯ ಸರ್ಕಾರದ ನಿರ್ಧಾರವನ್ನ ಸ್ವಾಗತ ಮಾಡುತ್ತೇವೆ. ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳಿಗೆ ಕಡಿವಾಣ ಹಾಕಬೇಕು. ಇದರ ಜೊತೆಗೆ ಸುಗ್ರೀವಾಜ್ಞೆ ದುರುಪಯೋಗ ಆಗುವುದನ್ನು ತಡೆಗಟ್ಟಬೇಕು. ಆ ನಿಟ್ಟಿನಲ್ಲೂ ರಾಜ್ಯ ಸರ್ಕಾರ ಕ್ರಮ ವಹಿಸಲಿ ಎಂದರು.

Key words: muda case, land owner, llegal , MLA ,G.T. Deve Gowda