Sunday, August 16, 2026

BDA Apartments

Home Front Page ಬಿಜೆಪಿಗೆ ಶಾಸಕ ಗಾಲಿ ಜನಾರ್ದನರೆಡ್ಡಿ ಮರುಸೇರ್ಪಡೆ: ಪಕ್ಷ ವಿಲೀನ.

ಬಿಜೆಪಿಗೆ ಶಾಸಕ ಗಾಲಿ ಜನಾರ್ದನರೆಡ್ಡಿ ಮರುಸೇರ್ಪಡೆ: ಪಕ್ಷ ವಿಲೀನ.

ಬೆಂಗಳೂರು,ಮಾರ್ಚ್,25,2024(www.justkannada.in): ಕಳೆದ ವಿಧಾನಸಭೆ ಚುನಾವಣೆ ವೇಳೆ ಕೆಆರ್ ಪಿಪಿ ಪಕ್ಷ ಕಟ್ಟಿ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಗಾಲಿ ಜನಾರ್ದನರೆಡ್ಡಿ ಇದೀಗ ಮತ್ತೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಜೊತೆಗೆ ಕೆಆರ್ ಪಿಪಿ ಪಕ್ಷವನ್ನೂ ಬಿಜೆಪಿ ಜೊತೆ ವಿಲೀನಗೊಳಿಸಿದ್ದಾರೆ.

ಇಂದು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಮರು ಸೇರ್ಪಡೆಯಾದರು.  ಬಿವೈ ವಿಜಯೇಂದ್ರ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.

ಬಳಿಕ ಮಾತನಾಡಿದ ಜನಾರ್ದನ ರೆಡ್ಡಿ, ಬಿಜೆಪಿಗೆ ಮರುಸೇರ್ಪಡೆ ಮಾಡಿಕೊಂಡಿದ್ದಕ್ಕೆ ಮಾಜಿ ಸಿಎಂ ಬಿಎಸ್ ವೈ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರಿಗೆ ಧನ್ಯವಾದಗಳು. ನನ್ನ ಆತ್ಮೀಯ ಗೆಳೆಯ ಶ್ರೀರಾಮುಲು ಸೇರಿ ಎಲ್ಲರಿಗೂ ಧನ್ಯವಾದ ಎಂದರು.

ನನ್ನ ರಕ್ತದ ಕಣ ಕಣದಲ್ಲೂ ಬಿಜೆಪಿ ಇದೆ. ನಾನು ಯಾವುದೇ ಷರತ್ತು ಹಾಕದೇ ಬಿಜೆಪಿ ಸೇರ್ಪಡೆಗೊಂಡಿದ್ದೇನೆ. ಕಾರ್ಯಕರ್ತನಾಗಿ ಸೇರ್ಪಡೆಯಾಗಿದ್ದೇನೆ. ನಾನು ಯಾವುದೇ ಹುದ್ದೆ ಆಕಾಂಕ್ಷಿಯಲ್ಲ.  ಕೊಟ್ಟ ಜವಾಬ್ದಾರಿ ನಿಭಾಯಿಸುವೆ ಎಂದು ತಿಳಿಸಿದರು.

Key words: MLA -Gali Janardana Reddy –Rejoins- BJP-KRPP Party -Merge