ಜೆಡಿಎಸ್ ಆಫರ್ ತಿರಸ್ಕರಿಸಿದ ಶಾಸಕ ಜಿ.ಟಿ.ದೇವೇಗೌಡ.

ಮೈಸೂರು,ನವೆಂಬರ್ ,13,2021(www.justkannada.in): ಮುಂಬರುವ ವಿಧಾನ ಪರಿಷತ್ ಚುನಾವಣೆಯನ್ನ ಶಾಸಕ ಜಿ.ಟಿ ದೇವೇಗೌಡರ ನೇತೃತ್ವದಲ್ಲೇ ಎದರಿಸುತ್ತೇವೆ. ಅವರು ಕುಟುಂಬದ ಒಬ್ಬರು ಅಭ್ಯರ್ಥಿ ಆದರೂ ಆಗಬಹುದು ಎಂದು ಶಾಸಕ ಸಾ.ರಾ ಮಹೇಶ್ ಹೇಳಿಕೆ ನೀಡಿದ ಬೆನ್ನಲ್ಲೆ ಇದೀಗ ಜೆಡಿಎಸ್ ಆಫರ್ ಅನ್ನ ಜಿ.ಟಿ ದೇವೇಗೌಡರು ತಿರಸ್ಕರಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ, ನನ್ನ ಕುಟುಂಬದವರು ಎಂಎಲ್ ಸಿ ಚುನಾವಣೆಯಲ್ಲಿ ಸ್ಫರ್ಧಿಸುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ನವರು ನನ್ನನ್ನು ಬಿಟ್ಟು ತುಂಬಾ ವರ್ಷಗಳಾಗಿದೆ. ನನ್ನನ್ನು ಬಿಟ್ಟೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪಕ್ಷದ ಅಧ್ಯಕ್ಷರ ನೇಮಕ ಮಾಡಿದ್ದಾರೆ. ನನ್ನ ಗಮನಕ್ಕೆ ಬಾರದೇ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕುಮಾರಸ್ವಾಮಿ ಬಂದು ಹೋಗಿದ್ದಾರೆ. ರಾಜಕೀಯ ಮಾಡುವ ಸಂದರ್ಭ ಬಂದಾಗ ಎಲ್ಲವನ್ನೂ ಹೇಳ್ತಿನಿ ಎಂದು ಜೆಡಿಎಸ್ ನಾಯಕರಿಗೆ ಜಿ.ಟಿ.ದೇವೇಗೌಡ ಟಾಂಗ್ ನೀಡಿದರು.coming-mysore-carrying-oxygen-mla-gt-deve-gowda

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುವ ಬಗ್ಗೆ ಶಾಸಕ ಜಿ.ಟಿ ದೇವೇಗೌಡರು ಸುಳಿವು ನೀಡಿದ್ದು, ಇತ್ತೀಚೆಗಷ್ಟೇ ಮಾಜಿ ಸಿಎಂ ಸಿದ್ಧರಾಮಯ್ಯ ಜತೆ ವೇದಿಕೆ ಹಂಚಿಕೊಂಡಿದ್ದರು.

Key words: MLA -GT Deve Gowda- rejected –JDS- offer.