ಬೆಂಗಳೂರು,ಸೆಪ್ಟಂಬರ್,4,2026 (www.justkannada.in): ಚುನಾವಣೆಗೆ ಇನ್ನೂ ಒಂದು ವರ್ಷವಿದೆ. ನನ್ನ ಮುಂದಿನ ನಡೆ ಬಗ್ಗೆ ಈಗಲೇ ಏನು ಹೇಳುವುದಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರು ತಿಳಿಸಿದರು.
ಇಂದು ಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಜಿ.ಟಿ ದೇವೇಗೌಡರು, ದಸರಾ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ವಿಶೇಷ ಕಾಳಜಿ ಇಟ್ಟುಕೊಂಡಿದ್ದಾರೆ . ಸಿಎಂ ಡಿಕೆ ಶಿವಕುಮಾರ್ ನಿನ್ನೆ ತಡರಾತ್ರಿವರೆಗೂ ಸಭೆ ನಡೆಸಿದ್ದಾರೆ ಎಂದರು.
ನನ್ನ ಮುಂದಿನ ನಡೆ ಬಗ್ಗೆ ಈಗಲೇ ಏನು ಹೇಳುವುದಿಲ್ಲ ಚುನಾವಣೆಗೆ ಇನ್ನೂ ಒಂದುವರೆ ವರ್ಷ ಸಮಯವಿದೆ. ಮುಂದಕ್ಕೆ ಎಲ್ಲವನ್ನೂ ಮಾತನಾಡುತ್ತೇನೆ ಸಹಕಾರ ಮಂಡಳದ ಅಧ್ಯಕ್ಷರು ಉಪಾಧ್ಯಕ್ಷರ ಆಯ್ಕೆ ಹಿನ್ನೆಲೆ ಹೀಗಾಗಿ ಅಭಿನಂದನೆ ಸಲ್ಲಿಸಲು ಬಂದಿದ್ದೆ ಎಂದರು.
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆ ಆಗಿದೆ. ಅಭ್ಯರ್ಥಿ ಆಯ್ಕೆ ಬಗ್ಗೆ ಇವತ್ತು ಚರ್ಚೆ ಬೆಡ ಎಂದು ತೀರ್ಮಾನ ಮಾಡಲಾಗಿದೆ. ಅಭ್ಯರ್ಥಿ ಆಯ್ಕೆ ಬಗ್ಗೆ ಮುಂದೆ ಸಿಎಂ ಸಭೆ ಕರೆದು ತೀರ್ಮಾನಿಸ್ತಾರೆ ಎಂದು ಶಾಸಕ ಜಿಟಿ ದೇವೇಗೌಡ ತಿಳಿಸಿದರು.
Key words: MLA GT Devegowda, Meet, CM DK Shivakumar







