ನನ್ನ ವಿರುದ್ದದ ಆರೋಪದಿಂದ ಮುಕ್ತನಾಗುತ್ತೇನೆ- ಶಾಸಕ ಹೆಚ್.ಡಿ ರೇವಣ್ಣ ವಿಶ್ವಾಸ.

ಬೆಂಗಳೂರು,ಮೇ,14,2024 (www.justkannada.in): ನನಗೆ ಕಾನೂನಿನ ಮೇಲೆ ಗೌರವವಿದೆ. ನನ್ನ ವಿರುದ್ದದ ಆರೋಪದಿಂದ ಮುಕ್ತನಾಗುತ್ತೇನೆ ಎಂದು ಮಾಜಿ ಸಚಿವ ಶಾಸಕ ಹೆಚ್.ಡಿ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಜಾಮೀನು ಪಡೆದು ಇಂದು ಬಿಡುಗಡೆಯಾಗಿದ್ದು ಬಳಿಕ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.

ಜೈಲಿನಿಂದ ಬಿಡುಗಡೆಯಾದ ಬಳಿಕ ತಮ್ಮ ಮನೆಗೆ ತೆರಳಿ ನಂತರ ತಿರುಮಲ ಲಕ್ಷ್ಮೀ ವೆಂಕಟೇಶ್ವರ ದೇವಾಲಯಕ್ಕೆ  ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅಲ್ಲಿಂದ ಬಸವನಗುಡಿಯಲ್ಲಿರುವ ಕಾರಂಜಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ಬಳಿಕ ತಮ್ಮ ನಿವಾಸಕ್ಕೆ ತೆರಳಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ರೇವಣ್ಣ,  ನನಗೆ ಕಾನೂನಿನ ಮೇಲೆ ಗೌರವವಿದೆ. ಕೋರ್ಟ್ ಆದೇಶ ನಾನು ಪಾಲಿಸುತ್ತೇನೆ. ನನಗೆ ದೇವರ ಮೇಲೆ ನಂಬಿಕೆ ಇದೆ. ನನ್ನ ವಿರುದ್ಧದ ಆರೋಪದಿಂದ ಮುಕ್ತನಾಗುತ್ತೇನೆ. ಈ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದರು.

Key words: MLA, HD Revanna, visit, temple