ನನ್ನ ಮನೆ ಮುಂದೆ ಪ್ರತಿಭಟನೆ ಮಾಡಿಸುವುದನ್ನ ಬಿಟ್ಟು ಡಿಕೆಶಿಗೆ ಇನ್ನೇನು ಮಾಡಿಸಲು ಸಾಧ್ಯ-ಶಾಸಕ ಜನಾರ್ದನ ರೆಡ್ಡಿ

ಬೆಂಗಳೂರು,ಜನವರಿ,19,2026 (www.justkannada.in): ನಿನ್ನೆ ನನ್ನ ಮನೆ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಗೆ  ನಮ್ಮ ಮನೆ ಮುಂದೆ ಪ್ರತಿಭಟನೆ ಮಾಡಿಸುವುದನ್ನ ಬಿಟ್ಟು ಇನ್ನೇನು ಮಾಡಿಸಲು ಸಾಧ್ಯ ಎಂದು ಶಾಸಕ ಜನಾರ್ದನರೆಡ್ಡಿ ಕಿಡಿಕಾರಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ,   ಡಿಸಿಎಂ ಡಿ.ಕೆ.ಶಿವಕುಮಾರ್ ಹತಾಶರಾಗಿದ್ದಾರೆ. ಅವರಿಗೆ ತಮ್ಮ ಕಾರ್ಯಕರ್ತರಿಂದ ಪ್ರತಿಭಟನೆಗಳನ್ನು ಮಾಡಿಸುವುದು ಬಿಟ್ಟರೆ ಬೇರೇನೂ ಮಾಡಲು ಸಾಧ್ಯವಿಲ್ಲ. ಬಳ್ಳಾರಿಯಲ್ಲಿ ಗಲಾಟೆ ಮಾಡಿ ನನ್ನನ್ನು ಟಾರ್ಗೆಟ್ ಮಾಡಿ ಕಾಂಗ್ರೆಸ್ ಶಾಸಕನ ಬೆಂಬಲಿಗರಿಂದಲೇ ನನ್ನ ಮೇಲೆ ಫೈರಿಂಗ್ ಮಾಡಿದ್ದಾರೆ. ದೂರು ನೀಡಲು ಹೋದರೆ ಸೂಕ್ತವಾಗಿ ಸ್ಪಂದಿಸಿಲ್ಲ. ಈವರೆಗೂ ಶಾಸಕ ಭರತ್ ರೆಡ್ಡಿಯನ್ನು ಬಂಧಿಸಿಯೂ ಇಲ್ಲ, ಆತನ ವಿರುದ್ಧ ಯಾವುದೇ ಕ್ರಮಗಳನ್ನೂ ಕೈಗೊಂಡಿಲ್ಲ ಎಂದು ಹರಿಹಾಯ್ದರು.

ಇದೇ ವೇಳೆ ಪೋಕ್ಸೋ ಪ್ರಕರಣದ ಸಂತ್ರಸ್ತೆ ಹೆಸರನ್ನು ಬಹಿರಂಗ ಪಡಿಸಿದ್ದಕ್ಕೆ ಶ್ರೀರಾಮುಲು ವಿರುದ್ಧ ಎಫ್‌ ಐಆರ್ ದಾಖಲಾಗಿರುವ ಕುರಿತು ಪ್ರತಿಕ್ರಿಯಿಸಿದ ಶಾಸಕ ಜನಾರ್ಧನ ರೆಡ್ಡಿ, ನೋಟಿಸ್ ಬಂದರೆ ಈ ಬಗ್ಗೆ ನಾವೂ ಕಾನೂನು ಪ್ರಕಾರವಾಗಿ ಮುಂದುವರೆಯುತ್ತೇವೆ ಎಂದರು.

Key words: Bangalore, MLA, Janardan Reddy, DCM DK Shivakumar