ಶಾಸಕ ಜನಾರ್ದನ ರೆಡ್ಡಿ ನಾಮಪತ್ರ ದೋಷ ಆರೋಪ: ಡಿಸಿಗೆ ಪತ್ರ ಬರೆದ ಚುನಾವಣಾ ಆಯೋಗ.

ಕೊಪ್ಪಳ,ಜುಲೈ,5,2023(www.justkannada.in):  ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿ ರಾಜ್ಯ ರಾಜಕಾರಣದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಶಾಸಕ ಜನಾರ್ದನ ರೆಡ್ಡಿಗೆ ಇದೀಗ ಸಂಕಷ್ಟ ಎದುರಾಗಿದೆ.

 ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಮತ್ತೆ ವಿಧಾನಸಭೆಗೆ ಪ್ರವೇಶ ಮಾಡಿರುವ ಶಾಸಕ ಜನಾರ್ದನ ರೆಡ್ಡಿಗೆ ಹೊಸ ಸಂಕಷ್ಟವೊಂದು ಎದುರಾಗಿದೆ. ಜನಾರ್ದನ ರಡ್ಡಿ ನಾಮಪತ್ರದಲ್ಲಿನ ದೋಷದ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗೆ ರಾಜ್ಯ ಚುನಾವಣಾಧಿಕಾರಿ ಪತ್ರ ಬರೆದಿದ್ದಾರೆ.

ಅನಂತಪುರದ ಗಣಿ ಉದ್ಯಮಿ ಟಪಾಲು ಶ್ಯಾಮ್​ ಪ್ರಸಾದ್ ಎನ್ನುವರು ಜನಾದರ್ನ ರೆಡ್ಡಿ ನಾಮಪತ್ರ ಸಲ್ಲಿಸುವಾಗ ಸರಿಯಾದ ಮಾಹಿತಿ ನೀಡಿಲ್ಲ. ವಾಹನಗಳು, ಆಸ್ತಿ ವಿವರ ಸರಿಯಾಗಿ ನೀಡಿಲ್ಲ ಎಂದು ಆರೋಪಿಸಿ ಚುನಾವಣಾ ಆಯೋಕ್ಕೆ ದೂರು ನೀಡಿದ್ದರು. ಈ ದೂರನ್ನು ಚುನಾವಣಾ ಆಯೋಗ ಸಹ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ ಎನ್ನಲಾಗಿದೆ.

Key words: MLA -Janardhana Reddy-defect – nomination papers-Election Commission -DC.